ಮಂಗಳೂರು, ಸೆಪ್ಟೆಂಬರ್ 28, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೆÇಲೀಸರು ಬಂಧಿಸಿ, ಸುಮಾರು 24 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಕಾಯರ್ ಗೋಳಿ ಕ್ರಾಸ್ ಬಳಿ ಸೆ 26 ರಂದು ಸಂಜೆ ನಡೆದಿದೆ.
ಬಂಧಿತ ಆರೋಪಿಗಳನ್ನು ಕೈರಂಗಳ ಗ್ರಾಮದ ಮುಡಿಪು ಸಮೀಪದ ಗೌಸಿಯಾ ಜುಮಾ ಮಸೀದಿ ಹತ್ತಿರದ ಗೌಸಿಯಾ ಕಂಪೌಂಡ್ ನಿವಾಸಿ ಅಬ್ದುಲ್ ರೆಹಮಾನ್ ಅವರ ಪುತ್ರ ನವಾಜ್ ಅಲಿಯಾಸ್ ನವ್ವಾ ಅಲಿಯಾಸ್ ಮುಡಿಪು ನವಾಜ್ (35), ಕೈರಂಗಳ ನಟ್ಟಿಹಿತ್ತಿಲು ನಿವಾಸಿ ಹಸೈನಾರ್ ಅವರ ಪುತ್ರ ಮೊಹಮ್ಮದ್ ಅರೀಫ್ ಎನ್ (36) ಹಾಗೂ ಕೈರಂಗಳ-ಮತ್ತೆಬಾರೆ ನಿವಾಸಿ ಅಲ್ಫೋನ್ಸ್ ಅವರ ಪುತ್ರ ಲಾಯ್ಡ್ ಡಿಸೋಜ (35) ಎಂದು ಹೆಸರಿಸಲಾಗಿದೆ.
ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿ ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೆÇಲೀಸರು ಈ ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.
ಬಂಧಿತ ಆರೋಪಿಗಳಿಂದ ಸುಮಾರು 24 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಎಂಡಿಎಂಎ ಹಾಗೂ 4 ಮೊಬೈಲ್ ಫೆÇೀನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಟೆಂಪೆÇೀ ವಾಹನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 29.80 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆರೋಪಿ ನವಾಜ್ ಎಂಬಾತನ ವಿರುದ್ಧ ಮಂಗಳೂರು ನಗರದ ವಿವಿಧ ಪೆÇಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಮೋಸ, ದನಗಳ್ಳತನ ಹಾಗೂ ಮಾದಕ ವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 16 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಕೊಣಾಜೆ ಪೆÇಲೀಸ್ ಠಾಣೆಯಲ್ಲಿ 12 ಪ್ರಕರಣಗಳು, ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ 2 ಪ್ರಕರಣಗಳು, ಮುಲ್ಕಿ ಪೆÇಲೀಸ್ ಠಾಣೆಯಲ್ಲಿ 1 ಪ್ರಕರಣ ಹಾಗೂ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆ ಉಳ್ಳಾಲ ಪೆÇಲೀಸ್ ಠಾಣೆ ಮತ್ತು ಕೊಣಾಜೆ ಪೆÇಲೀಸ್ ಠಾಣೆಯಲ್ಲಿ ತಲಾ ಎರಡು ಪ್ರಕರಣ ಸೇರಿದಂತೆ ಒಟ್ಟು 4 ಪ್ರಕರಣಗಳು ದಾಖಲಾಗಿರುತ್ತವೆ.
ಈ ಮಾದಕ ವಸ್ತು ಮಾರಾಟ/ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.















0 comments:
Post a Comment