ಮಂಗಳೂರು, ಸೆಪ್ಟೆಂಬರ್ 20, 2026 (ಕರಾವಳಿ ಟೈಮ್ಸ್) : ಮಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆ 19 ರಂದು ಮುಂಜಾನೆ ಮಂಗಳೂರು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಅಲ್ಲಿನ ಅಭಿವೃದ್ಧಿ ಕಾರ್ಯಗಳು ಹಾಗೂ ಮೂಲಸೌಕರ್ಯ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಡಾ ಯು.ಟಿ. ಖಾದರ್ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಮುಖ್ಯಮಂತ್ರಿಗಳೊಂದಿಗೆ ಉಪಸ್ಥಿತರಿದ್ದರು.
ಮಂಗಳೂರು ಮೀನುಗಾರಿಕಾ ಬಂದರಿನ ಸಮಗ್ರ ಅಭಿವೃದ್ಧಿ, ಮೀನುಗಾರಿಕೆ ಕ್ಷೇತ್ರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳ ಬಲವರ್ಧನೆ ಹಾಗೂ ಬಂದರಿನ ಸೌಲಭ್ಯಗಳ ಸುಧಾರಣೆ ಸೇರಿದಂತೆ ಕರಾವಳಿ ಭಾಗದ ವಿವಿಧ ಪ್ರಮುಖ ಅಭಿವೃದ್ಧಿ ವಿಚಾರಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಯಿತು.











0 comments:
Post a Comment