ಮಂಗಳೂರು, ಸೆಪ್ಟೆಂಬರ್ 15, 2026 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೆಪ್ಟೆಂಬರ್ 17 ರಿಂದ 19 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 17 ರಂದು ಸಂಜೆ 5.25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ಗಂಟೆಗೆ ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ, ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿ ಜಿಲ್ಲೆಯ ಹೆಬ್ರಿಗೆ ತೆರಳಲಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ಸೆಪ್ಟೆಂಬರ್ 19 ಬೆಳಿಗ್ಗೆ 9.30ಕ್ಕೆ ಹೆಲಿಕಾಪ್ಟರ್ ಮೂಲಕ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
15 September 2026
- Blogger Comments
- Facebook Comments
Subscribe to:
Post Comments (Atom)
















0 comments:
Post a Comment