ಬಂಟ್ವಾಳ, ಸೆಪ್ಟೆಂಬರ್ 19, 2026 (ಕರಾವಳಿ ಟೈಮ್ಸ್) : ಕರಾವಳಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇಂದ್ರದ ಮಾಜಿ ಮಂತ್ರಿ, ಕೆಪಿಸಿಸಿ ಮಾಜಿ ಅಧ್ಯಕ್ಷ, ಪಕ್ಷದ ಹಿರಿಯ ಮುಖಂಡ ಬಿ ಜನಾರ್ದನ ಪೂಜಾರಿ ಅವರನ್ನು ಸೆ 18 ರಂದು ರಾತ್ರಿ ವೇಳೆ ಪೂಜಾರಿ ಅವರ ಬಂಟ್ವಾಳದ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಮಂಗಳೂರಿನಲ್ಲಿ ನಡೆದ ಐತಿಹಾಸಿಕ ವಿಶೇಷ ಸಚಿವ ಸಂಪುಟ ಸಭೆಯ ಮಹತ್ವದ ಸಂದರ್ಭದಲ್ಲೇ ಹಿರಿಯರ ಭೇಟಿಯ ಸುಯೋಗ ಒದಗಿಬಂದಿದ್ದು ಅತ್ಯಂತ ಸಂತಸ ತಂದಿದೆ ಎಂದು ಇದೇ ವೇಳೆ ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಪದ್ಮರಾಜ್ ಪೂಜಾರಿ, ಪ್ರಮುಖರಾದ ಇನಾಯತ್ ಅಲಿ, ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಿಥುನ್ ರೈ ಸಹಿತ ಹಲವು ಮುಖಂಡರುಗಳು ಜೊತೆಗಿದ್ದರು.













0 comments:
Post a Comment