ಸೆ. 18 ರಂದು ಮಂಗಳೂರಿನಲ್ಲಿ ಕ್ಯಾಬಿನೆಟ್ ಸಭೆ : ಡೀಸಿ ಕಚೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವರು - Karavali Times ಸೆ. 18 ರಂದು ಮಂಗಳೂರಿನಲ್ಲಿ ಕ್ಯಾಬಿನೆಟ್ ಸಭೆ : ಡೀಸಿ ಕಚೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವರು - Karavali Times

728x90

6 September 2026

ಸೆ. 18 ರಂದು ಮಂಗಳೂರಿನಲ್ಲಿ ಕ್ಯಾಬಿನೆಟ್ ಸಭೆ : ಡೀಸಿ ಕಚೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವರು

 ಮಂಗಳೂರು, ಸೆಪ್ಟೆಂಬರ್ 06, 2026 (ಕರಾವಳಿ ಟೈಮ್ಸ್) : ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಿಗದಿಯಾಗಿರುವ ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಅವರು ಸೆ 6 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು. 

ಸಭೆ ನಡೆಸಲು ಬೇಕಾದ ಅಗತ್ಯ ಸ್ಥಳಾವಕಾಶ, ಪಾರ್ಕಿಂಗ್ ವ್ಯವಸ್ಥೆ, ಭದ್ರತೆ ಮತ್ತು ಸಂಚಾರ ನಿಯಂತ್ರಣ ಮತ್ತಿತರ ಸೌಲಭ್ಯಗಳ ಬಗ್ಗೆ ಸಚಿವರು ಪರಿಶೀಲಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಎಡಿಸಿ ರಾಜು ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಸೆ. 18 ರಂದು ಮಂಗಳೂರಿನಲ್ಲಿ ಕ್ಯಾಬಿನೆಟ್ ಸಭೆ : ಡೀಸಿ ಕಚೇರಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಉಸ್ತುವಾರಿ ಸಚಿವರು Rating: 5 Reviewed By: karavali Times
Scroll to Top