ಅಗ್ರಾರ್ : ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ್ ಅಭಿಯಾನ - Karavali Times ಅಗ್ರಾರ್ : ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ್ ಅಭಿಯಾನ - Karavali Times

728x90

14 September 2026

ಅಗ್ರಾರ್ : ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ್ ಅಭಿಯಾನ

ಬಂಟ್ವಾಳ, ಸೆಪ್ಟೆಂಬರ್ 11, 2026 (ಕರಾವಳಿ ಟೈಮ್ಸ್) : ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಅಗ್ರಾರ್ ಇದರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ವತಿಯಿಂದ ಸ್ವಚ್ಛ ಭಾರತ್ ಅಭಿಯಾನ ಸೆ 12 ರಂದು ನಡೆಯಿತು. ಕಾರ್ಯಕ್ರಮದಲ್ಲಿ 25 ಸ್ಕೌಟ್ ಹಾಗೂ 23 ಗೈಡ್ ಸೇರಿದಂತೆ ಒಟ್ಟು 48 ವಿದ್ಯಾರ್ಥಿಗಳು ಪಾಲ್ಗೊಂಡರು.

ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ನಡೆದ ಸ್ವಚ್ಛತಾ ಅಭಿಯಾನದಲ್ಲಿ ವಿದ್ಯಾರ್ಥಿಗಳು ಬಂಟ್ವಾಳ-ಬಿ ಸಿ ರೋಡ್ ರೈಲ್ವೆ ಮಾರ್ಗದ ರೈಲ್ವೆ ಗೇಟ್ ಹಾಗೂ ಸುತ್ತಮುತ್ತಲಿನ ರೈಲ್ವೆ ಪರಿಸರವನ್ನು ಸ್ವಚ್ಛಗೊಳಿಸಿದರು. ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿ ಮತ್ತು ಪರಿಸರ ಸ್ನೇಹಿಯಾಗಿ ಕಾಪಾಡುವ ಜವಾಬ್ದಾರಿಯ ಕುರಿತು ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದರು.

ಈ ಸಂದರ್ಭ ರೈಲ್ವೆ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಸ್ವಚ್ಛತೆ, ಪರಿಸರ ಸಂರಕ್ಷಣೆ, ಸಾರ್ವಜನಿಕ ಸ್ಥಳಗಳ ನಿರ್ವಹಣೆ ಹಾಗೂ ನಾಗರಿಕರ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು, ‘ಸ್ವಚ್ಛ ಪರಿಸರ-ಆರೋಗ್ಯಕರ ಸಮಾಜ’ ಎಂಬ ಸಂದೇಶವನ್ನು ಸಾರಿದರು.

ಸ್ವಚ್ಛತಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ಸಂದರ್ಭ ಪಿಎಸ್ಸೈ ಸಂದೀಪ್ ಅವರು ಪೆÇಲೀಸ್ ಇಲಾಖೆಯ ಕಾರ್ಯಚಟುವಟಿಕೆಗಳು, ಕರ್ತವ್ಯಗಳು ಹಾಗೂ ಸಾರ್ವಜನಿಕರೊಂದಿಗೆ ಪೆÇಲೀಸರ ಸಹಕಾರದ ಕುರಿತು ವಿದ್ಯಾರ್ಥಿಗಳಿಗೆ  ಮಾಹಿತಿ ನೀಡಿದರು. ಪೆÇಲೀಸ್ ಠಾಣೆಯ ಕಾರ್ಯವೈಖರಿಯನ್ನು ತಿಳಿದುಕೊಳ್ಳಲು ಈ ಭೇಟಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ಜಿಲ್ಲಾ ಆಯುಕ್ತ ಮಹಮ್ಮದ್ ತುಂಬೆ, ಎಡಿಸಿ ಪೀಟರ್ ಜೆರಿ ರೋಡ್ರಿಗಸ್, ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಪ್ರಿನೀತ್ ರೋಡ್ರಿಗಸ್, ಕಾರ್ಯದರ್ಶಿ ಐತ್ತಪ್ಪ ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಪ್ರಶಾಂತಿ ಮೋನಿಸ್ ಹಾಗೂ ಸ್ಕೌಟ್-ಗೈಡ್ಸ್ ಶಿಕ್ಷಕಿಯರಾದ ಫ್ಲೇವಿ ವಾಸ್ ಮತ್ತು ವಿನಿತಾ ಡಿಸಿಲ್ವಾ ಭಾಗವಹಿಸಿದ್ದರು. 

ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಪರಿಸರ ಕಾಳಜಿ, ಶಿಸ್ತು, ಸಮಾಜ ಸೇವೆ ಮತ್ತು ಜವಾಬ್ದಾರಿಯುತ ನಾಗರಿಕತೆಯ ಮನೋಭಾವವನ್ನು ಬೆಳೆಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು ಎಂದು ಶಾಲಾ ಪ್ರಕಟಣೆ ತಿಳಿಸಿದೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಅಗ್ರಾರ್ : ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಂದ ಸ್ವಚ್ಛ ಭಾರತ್ ಅಭಿಯಾನ Rating: 5 Reviewed By: karavali Times
Scroll to Top