ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆ ಅಪಮಾನಿಸಿದ ಆರೋಪದಲ್ಲಿ ನ್ಯಾಯವಾದಿ ವಿರುದ್ದ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು - Karavali Times ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆ ಅಪಮಾನಿಸಿದ ಆರೋಪದಲ್ಲಿ ನ್ಯಾಯವಾದಿ ವಿರುದ್ದ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು - Karavali Times

728x90

29 September 2026

ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆ ಅಪಮಾನಿಸಿದ ಆರೋಪದಲ್ಲಿ ನ್ಯಾಯವಾದಿ ವಿರುದ್ದ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ, ಸೆಪ್ಟೆಂಬರ್ 29, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡಿನಲ್ಲಿ ಸೆ 28 ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯದ ಪ್ರಕ್ರಿಯೆಯ ಬಗ್ಗೆ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ ಆರೋಪದಲ್ಲಿ ನ್ಯಾಯವಾದಿ ಪ್ರಸಾದ್ ಎಂಬವರ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬಡಗಬೆಳ್ಳೂರು ನಿವಾಸಿ ಹನೀಫ್ ಅಲಿಯಾಸ್ ಮಹಮ್ಮದ್ ಹನೀಫ್ (43) ಅವರು ನೀಡಿದ ದೂರಿನಂತೆ, ಸೆ 28 ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ ಸಿ ರೋಡಿನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ನಡೆಸಿದ ವಕೀಲ ಪ್ರಸಾದ್ ಎಂಬವರು, ತನ್ನ ಭಾಷಣದ ವೇಳೆ ನ್ಯಾಯಾಲಯದ ಪ್ರಕ್ರಿಯೆಯ ಕುರಿತು ಮತ್ತು ಪ್ರಕರಣವೊಂದರ ತನಿಖೆಯ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಹಾಗೂ ಹೇಳಿಕೆಯನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರರ್ಜಿ ದಾಖಲಾಗಿದ್ದು, ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯದ ಪ್ರಕ್ರಿಯೆ ಬಗ್ಗೆ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ವ್ಯವಸ್ಥೆ ಅಪಮಾನಿಸಿದ ಆರೋಪದಲ್ಲಿ ನ್ಯಾಯವಾದಿ ವಿರುದ್ದ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು Rating: 5 Reviewed By: karavali Times
Scroll to Top