ಮಣಿನಾಲ್ಕೂರು : ಕ್ಷುಲ್ಲಕ ಕಾರಣಕ್ಕೆ ಮನೆಯಂಗಳಕ್ಕೆ ಅಕ್ರಮ ಪ್ರವೇಶಗೈದು ತಂದೆ-ಮಗಳಿಗೆ ಹಲ್ಲೆ - Karavali Times ಮಣಿನಾಲ್ಕೂರು : ಕ್ಷುಲ್ಲಕ ಕಾರಣಕ್ಕೆ ಮನೆಯಂಗಳಕ್ಕೆ ಅಕ್ರಮ ಪ್ರವೇಶಗೈದು ತಂದೆ-ಮಗಳಿಗೆ ಹಲ್ಲೆ - Karavali Times

728x90

7 September 2026

ಮಣಿನಾಲ್ಕೂರು : ಕ್ಷುಲ್ಲಕ ಕಾರಣಕ್ಕೆ ಮನೆಯಂಗಳಕ್ಕೆ ಅಕ್ರಮ ಪ್ರವೇಶಗೈದು ತಂದೆ-ಮಗಳಿಗೆ ಹಲ್ಲೆ

ಬಂಟ್ವಾಳ, ಸೆಪ್ಟೆಂಬರ್ 07, 2026 (ಕರಾವಳಿ ಟೈಮ್ಸ್) : ಟೇಬಲ್ ಸಾಗಿಸುತ್ತಿದ್ದ ವೇಳೆ ರಸ್ತೆಗೆ ಅಡ್ಡಲಾಗಿ ನೆಟ್ಟಿದ್ದ ಮರದ ಕಂಬ ಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ಮನೆಯಂಗಳಕ್ಕೆ ಅಕ್ರಮ ಪ್ರವೇಶಗೈದ ತಂಡ ಬೈದು ಹಲ್ಲೆ ನಡೆಸಿದ ಘಟನೆ ಮಣಿನಾಲ್ಕೂರು ಗ್ರಾಮದಲ್ಲಿ ಸೆ 5 ರಂದು ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇಲ್ಲಿನ ನಿವಾಸಿ ಹುಸೈನ್ (65) ಎಂಬವರು ಸೆ 5 ರಂದು ಬೆಳಿಗ್ಗೆ ತನ್ನ ಮನೆಯಲ್ಲಿ ನಡೆದ ಕಾರ್ಯಕ್ರಮದ ಟೇಬಲುಗಳನ್ನು ಸಾಗಿಸುತ್ತಿದ್ದ ವೇಳೆ, ಕಚ್ಚಾ ಮಣ್ಣು ರಸ್ತೆಗೆ ಅಡ್ಡಲಾಗಿ ನೆಟ್ಟಿದ್ದ ಮರದ ಕಂಬ ಬಿದ್ದ ವಿಚಾರಕ್ಕೆ ಕುಪಿತರಾದ ಹೈದರ್, ಜೌಫರ್ ಮತ್ತು ತಾಯಿರಾ ಅವರು ಹುಸೈನ್ ಅವರ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಜೌಫರನು ಹುಸೈನ್ ಅವರನ್ನುದ್ದೇಶಿಸಿ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ತಡೆಯಲು ಬಂದ ಹುಸೈನ್ ಅವರ ಮಗ ಹಾಗೂ ಮಗಳಿಗೂ ಹಲ್ಲೆ ನಡೆಸಿರುತ್ತಾರೆ ಎಂದು ಹುಸೈನ್ ಅವರು ನೀಡಿದ ದೂರಿನಂತೆ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಣಿನಾಲ್ಕೂರು : ಕ್ಷುಲ್ಲಕ ಕಾರಣಕ್ಕೆ ಮನೆಯಂಗಳಕ್ಕೆ ಅಕ್ರಮ ಪ್ರವೇಶಗೈದು ತಂದೆ-ಮಗಳಿಗೆ ಹಲ್ಲೆ Rating: 5 Reviewed By: karavali Times
Scroll to Top