ಪುತ್ತೂರು, ಸೆಪ್ಟೆಂಬರ್ 09, 2026 (ಕರಾವಳಿ ಟೈಮ್ಸ್) : ಕೆಲಸದ ನಿಮಿತ್ತ ಅಟೋ ರಿಕ್ಷಾದಲ್ಲಿ ಹೊರಟಿದ್ದ ಮಹಿಳೆಯನ್ನು ಮಾರ್ಗ ಬದಲಿಸಿ ಕರೆದುಕೊಂಡು ಹೋಗಿ ಆಕೆಯ ಜೊತೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಅಟೋ ರಿಕ್ಷಾ ಚಾಲಕನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ಸೆ 9 ರಂದು ನಡೆದಿದೆ.
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿವಾಸಿ ಮಹಿಳೆ ಸೆ 9 ರಂದು ಬೆಳಿಗ್ಗೆ ಕೆಲಸದ ನಿಮಿತ್ತ ಮನೆಯಿಂದ ಹೊರಟು, ಆಕೆಯ ಪರಿಚಯದ ಬಾಲಕೃಷ್ಣ ಎಂಬವರು ಚಾಲಕರಾಗಿರುವ ಕೆಎ21 ಬಿ2011 ನೋಂದಣಿ ಸಂಖ್ಯೆಯ ಅಟೋ ರಿಕ್ಷಾದಲ್ಲಿ ಪುತ್ತೂರು ಕಡೆಗೆ ತೆರಳುತ್ತಿದ್ದಾಗ, ಅಟೋ ಚಾಲಕನು ಮಾರ್ಗ ಬದಲಿಸಿ, ರಿಕ್ಷಾವನ್ನು ಕುರಿಯ ಎಂಬಲ್ಲಿಗೆ ತಂದು ನಿಲ್ಲಿಸಿ ಬಳಿಕ ಸಂತ್ರಸ್ಥ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 117-2026, ಕಲಂ 74, 75, 64 ಬಿ ಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿ ರಿಕ್ಷಾ ಚಾಲಕ ಬಾಲಕೃಷ್ಣ ಎಂಬಾತನನ್ನು ಸಂಟ್ಯಾರ್-ಪರ್ಪುಂಜ ಬಳಿ ಪುತ್ತೂರು ಗ್ರಾಮಾಂತರ ಠಾಣಾ ಪೆÇಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು, ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.











0 comments:
Post a Comment