ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರುಗಳಿಂದ ಡೀಸೆಲ್ ಕದಿಯುತ್ತಿದ್ದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೊಲೀಸರು : ಡೀಸೆಲ್, ಇತರ ಸೊತ್ತುಗಳ ಸಹಿತ ಮಂಡ್ಯ ಮೂಲದ ಇಬ್ಬರ ಸೆರೆ - Karavali Times ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರುಗಳಿಂದ ಡೀಸೆಲ್ ಕದಿಯುತ್ತಿದ್ದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೊಲೀಸರು : ಡೀಸೆಲ್, ಇತರ ಸೊತ್ತುಗಳ ಸಹಿತ ಮಂಡ್ಯ ಮೂಲದ ಇಬ್ಬರ ಸೆರೆ - Karavali Times

728x90

4 September 2026

ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರುಗಳಿಂದ ಡೀಸೆಲ್ ಕದಿಯುತ್ತಿದ್ದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೊಲೀಸರು : ಡೀಸೆಲ್, ಇತರ ಸೊತ್ತುಗಳ ಸಹಿತ ಮಂಡ್ಯ ಮೂಲದ ಇಬ್ಬರ ಸೆರೆ

ಉಪ್ಪಿನಂಗಡಿ, ಸೆಪ್ಟೆಂಬರ್ 04, 2026 (ಕರಾವಳಿ ಟೈಮ್ಸ್) : ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್ ವಾಹನಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೊಲೀಸರು ಕಳ್ಳತನ ಮಾಡಿದ ಡೀಸೆಲ್ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕೌಕ್ರಾಡಿ ಗ್ರಾಮದ ಆಲಂಪಾಡಿ ಕ್ರಾಸ್ ಎಂಬಲ್ಲಿ ಸೆ 3 ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಮಂಡ್ಯ-ಮದ್ದೂರು ನಿವಾಸಿಗಳಾದ ಜೈಮುತ್ತಾ (23) ಹಾಗೂ ಮುತ್ತು (28) ಎಂದು ಹೆಸರಿಸಲಾಗಿದೆ. ಬಂಧಿತರಿಂದ ಪಿಕಪ್ ವಾಹನ, 20 ಲೀಟರ್ ಡೀಸೆಲ್, ಖಾಲಿ ಕ್ಯಾನ್ ಗಳು ಹಾಗೂ ಕಳ್ಳತನಕ್ಕೆ ಬಳಸುತ್ತಿದ್ದ ಪೈಪುಗಳ ಸಹಿತ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಸೆ 3 ರಂದು ರಾತ್ರಿ ಉಪ್ಪಿನಂಗಡಿ ಪೊಲೀಸರು ಬೈಕಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಎಂಬಲ್ಲಿ ತೆರಳಿದಾಗ, ಮಂಗಳೂರು-ಬೆಂಗಳೂರು ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್ ಬಳಿ ಒಂದು ಬೊಲೆರೋ ಪಿಕ್ ಅಪ್ ವಾಹನ ನಿಂತಿದ್ದು, ಪಕ್ಕದಲ್ಲಿ 3 ಜನ ಅನುಮಾನಾಸ್ಪದವಾಗಿ ನಿಂತಿರುವುದು ಕಂಡು ಬಂದಿದೆ. ಪೆÇಲೀಸರು ಬರುತ್ತಿರುವುದನ್ನು ಕಂಡು ಅವರುಗಳು ಪರಾರಿಯಾಗಲು ಯತ್ನಿಸಿದಾಗ ಇಬ್ಬರನ್ನು ಹಿಡಿದು ವಿಚಾರಿಸಿದಾಗ ಆರೋಪಿಗಳು ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡಿಸೆಲ್ ಟ್ಯಾಂಕಿನಿಂದ ಡಿಸೇಲ್ ಕಳ್ಳತನ ಮಾಡುತ್ತಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಸ್ಥಳವನ್ನು ಪರಿಶೀಲಿಸಿದಾಗ ಕ್ಯಾನುಗಳಲ್ಲಿ ತುಂಬಿಸಲಾಗಿದ್ದ ಸುಮಾರು 20 ಲೀಟರ್ ಡಿಸೆಲ್, ಖಾಲಿ ಕ್ಯಾನ್ ಗಳು, ಡಿಸೆಲ್ ಕಳವು ಮಾಡಲು ಉಪಯೋಗಿಸದ ಒಂದು ರಬ್ಬರ್ ಪೈಪು ಹಾಗೂ ಇತರೆ ಸೊತ್ತುಗಳನ್ನು ಕೃತ್ಯಕ್ಕೆ ಬಳಸಿದ ಪಿಕಪ್ ವಾಹನದೊಂದಿಗೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2026, ಕಲಂ ಕಲಂ 35 (1)(ಡಿ) ಬಿ.ಎನ್.ಎಸ್.-2023 ಮತ್ತು ಕಲಂ 303 (2) ಬಿ.ಎನ್.ಎಸ್.-2023 ರಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರುಗಳಿಂದ ಡೀಸೆಲ್ ಕದಿಯುತ್ತಿದ್ದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೊಲೀಸರು : ಡೀಸೆಲ್, ಇತರ ಸೊತ್ತುಗಳ ಸಹಿತ ಮಂಡ್ಯ ಮೂಲದ ಇಬ್ಬರ ಸೆರೆ Rating: 5 Reviewed By: karavali Times
Scroll to Top