ಮಂಗಳೂರು, ಸೆಪ್ಟೆಂಬರ್ 11, 2026 (ಕರಾವಳಿ ಟೈಮ್ಸ್) : ಪ್ರಸ್ತುತ ವರ್ಷ ಜನವರಿಯಿಂದ ಇದುವರೆಗೆ ಒಟ್ಟು 150 ಕಾಲೇಜುಗಳ 8,310 ವಿದ್ಯಾರ್ಥಿಗಳನ್ನು ಮಾದಕ ವಸ್ತು ಬಳಕೆ ಬಗ್ಗೆ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 98 ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಬಳಕೆಯ ಪರೀಕ್ಷಾ ಫಲಿತಾಂಶ ಪಾಸಿಟಿವ್ ಬಂದಿದ್ದು, ಕಾಲೇಜು ಆಡಳಿತ ಮಂಡಳಿ ಹಾಗೂ ಪೆÇೀಷಕರ ಮೂಲಕ ಅವರಿಗೆ ಸಮಾಲೋಚನೆ ನೀಡುವ ವ್ಯವಸ್ಥೆ ಮಾಡಲಾಗಿತ್ತು.
ಮೊದಲ ಹಂತದ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ವಿದ್ಯಾರ್ಥಿಗಳ ಸ್ಥಿತಿಯನ್ನು ಪರಿಶೀಲಿಸಿ, ಫಲಿತಾಂಶವನ್ನು ದೃಢಪಡಿಸುವ ಉದ್ದೇಶದಿಂದ ಸೆ 10 ರಂದು ವಿಶೇಷ ಮರು ಪರೀಕ್ಷಾ ಅಭಿಯಾನ ನಡೆಸಲಾಯಿತು. ಈ ವೇಳೆ ಮೊದಲ ಹಂತದಲ್ಲಿ ಪಾಸಿಟಿವ್ ಬಂದಿದ್ದ 50 ವಿದ್ಯಾರ್ಥಿಗಳನ್ನು ಮರುಪರೀಕ್ಷೆಗೆ ಒಳಪಡಿಸಲಾಯಿತು. ಮರು ಪರೀಕ್ಷೆಯಲ್ಲಿ 38 ವಿದ್ಯಾರ್ಥಿಗಳ ಫಲಿತಾಂಶ ನೆಗೆಟಿವ್ ಬಂದಿದ್ದು, ತಾವು ಮಾದಕ ವಸ್ತು ಬಳಕೆಯನ್ನು ನಿಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಪಾಸಿಟಿವ್ ಬಂದ ವಿದ್ಯಾರ್ಥಿಗಳಲ್ಲಿ 75%ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ನೆಗೆಟಿವ್ ಫಲಿತಾಂಶ ಪಡೆದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಉಳಿದ 12 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಫಲಿತಾಂಶ ಮುಂದುವರಿದಿರುವ ಹಿನ್ನೆಲೆಯಲ್ಲಿ, ಅವರ ಸಮಾಲೋಚನಾ ಪ್ರಕ್ರಿಯೆಯನ್ನು ಪೆÇೀಷಕರು ಹಾಗೂ ಕಾಲೇಜು ಆಡಳಿತ ಮಂಡಳಿಗಳು ನಿಕಟವಾಗಿ ಅನುಸರಿಸುವಂತೆ ಸೂಚಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.











0 comments:
Post a Comment