ಗ್ಯಾರಂಟಿ ಯೋಜನೆಗಳು ಜನರ ಜೀವನದಲ್ಲಿ ಮಹತ್ತರ ಬದಲಾವಣೆ ತಂದಿರುವುದು ಸಾಬೀತು : ಸಚಿವ ಡಾ. ಯು.ಟಿ. ಖಾದರ್ - Karavali Times ಗ್ಯಾರಂಟಿ ಯೋಜನೆಗಳು ಜನರ ಜೀವನದಲ್ಲಿ ಮಹತ್ತರ ಬದಲಾವಣೆ ತಂದಿರುವುದು ಸಾಬೀತು : ಸಚಿವ ಡಾ. ಯು.ಟಿ. ಖಾದರ್ - Karavali Times

728x90

1 September 2026

ಗ್ಯಾರಂಟಿ ಯೋಜನೆಗಳು ಜನರ ಜೀವನದಲ್ಲಿ ಮಹತ್ತರ ಬದಲಾವಣೆ ತಂದಿರುವುದು ಸಾಬೀತು : ಸಚಿವ ಡಾ. ಯು.ಟಿ. ಖಾದರ್

ಮಂಗಳೂರು, ಸೆಪ್ಟೆಂಬರ್ 01, 2026 ( ಕರಾವಳಿ ಟೈಮ್ಸ್) : ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಮತ್ತು ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಮೇಲೆ ಪರಿಣಾಮ ಬೀರಲಿದೆ ಎಂಬ ಅನೇಕ ಟೀಕೆಗಳಿಗೆ ಒಳಗಾಗಿದ್ದ ಈ ಯೋಜನೆಗಳು ಇಂದು ದೇಶಕ್ಕೆ ಮಾದರಿ ಜನಪರ ಯೋಜನೆಗಳಾಗಿ ಯಶಸ್ವಿಯಾಗಿದೆ ಎಂದು ರಾಜ್ಯ ಆಹಾರ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಜ್ ಮತ್ತು ವಕ್ಫ್ ಇಲಾಖಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಡಾ ಯು ಟಿ ಖಾದರ್  ಹೇಳಿದ್ದಾರೆ.

     ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮಂಗಳೂರು ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೆ 1 ರಂದು ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕ ಆಡಳಿತ ವ್ಯವಸ್ಥೆಯಿಂದ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡು ಜನಪರ ಯೋಜನೆಯಾಗಿ ರೂಪುಗೊಂಡಿದೆ. ಇದು ಕೇವಲ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಲ್ಲ, ಬದಲಾಗಿ  ಜನರ ಜೀವನದಲ್ಲಿ ಬದಲಾವಣೆ ತಂದಿರುವುದನ್ನು ದಾಖಲೆಗಳ ಮೂಲಕ ತೋರಿಸುವ ಯೋಜನೆಗಳು ಎಂದರು. 

ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರ ನೀಡಿದ ಅನುದಾನವನ್ನು ಫಲಾನುಭವಿಗಳು ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನ ಮತ್ತು ಆತ್ಮವಿಶ್ವಾಸ ಬೆಳೆಸಿಕೊಂಡು ಗೌರವಯುತವಾದ ಬದುಕು ಸಾಗಿಸುತ್ತಿದ್ದು, ಅವರು ದೇಶದ ಆರ್ಥಿಕ ಶಕ್ತಿಯ ಭಾಗವಾಗಿದ್ದಾರೆ. ಅನೇಕರು ತಮ್ಮ ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿದ್ದಾರೆ ಎಂದ ಸಚಿವರು ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವು, ಗೃಹಜ್ಯೋತಿಯಿಂದ ಉಚಿತ ವಿದ್ಯುತ್, ಶಕ್ತಿ ಯೋಜನೆಯಿಂದ ಉಚಿತ ಪ್ರಯಾಣ, ಅನ್ನಭಾಗ್ಯದಿಂದ ಬಡಕುಟುಂಬಗಳಿಗೆ ಆಹಾರದ ಭದ್ರತೆಗೆ ನೆರವು ಹಾಗೂ ಯುವಜನರಿಗೆ ಆರ್ಥಿಕ ನೆರವು ನೀಡಿ ಜನಜೀವನ ಬದಲಾವಣೆಗೆ ಸಹಕಾರಿಯಾಗಿದೆ ಎಂದರು. 

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್ ಎಂ ರೇವಣ್ಣ ಅಧ್ಯಕ್ಷತೆ  ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ,  ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾ  ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ, ಜಿಲ್ಲಾ  ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾ£ನಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್, ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್, ಸದಸ್ಯರಾದ ಆಲಿಸ್ಟನ್ ಕ್ಲೈವ್ ಡಿಕುನ್ಹಾ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಶಾಹುಲ್ ಹಮೀದ್, ರಫೀಕ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್ ಮೊದಲಾದವರು ಭಾಗವಹಿಸಿದ್ದರು. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ಕಾರ್ಯಕ್ರಮ ಆಯೋಜಿಸಿದ್ದರು.

ಕಾರ್ಯಕ್ರಮದ ಮುಂಚಿತವಾಗಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್ ಎಂ ರೇವಣ್ಣ ಸಂಜೀವಿನಿ ಮಾಸಿಕ ಸಂತೆ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಆಡಳಿತ ಅಧಿಕಾರಿ ಶಕುಂತಲಾ ಶೆಣೈ ಸ್ವಾಗತಿಸಿ, ಗ್ರಾಮೀಣ ಉದ್ಯೋಗ ಇಲಾಖೆ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಗ್ಯಾರಂಟಿ ಯೋಜನೆಗಳು ಜನರ ಜೀವನದಲ್ಲಿ ಮಹತ್ತರ ಬದಲಾವಣೆ ತಂದಿರುವುದು ಸಾಬೀತು : ಸಚಿವ ಡಾ. ಯು.ಟಿ. ಖಾದರ್ Rating: 5 Reviewed By: karavali Times
Scroll to Top