ಎಂ.ಆರ್.ಪಿ,ಎಲ್. ಘಟಕದಲ್ಲಿ ಭಾರೀ ಶಬ್ದದೊಂದಿಗೆ ಸ್ಫೋಟ : 9 ಮಂದಿಗೆ ಗಾಯ, ಸ್ಥಳೀಯರಲ್ಲಿ ಆತಂಕ, ಅಧಿಕಾರಿಗಳ ಭೇಟಿ, ಪರಿಶೀಲನೆ - Karavali Times ಎಂ.ಆರ್.ಪಿ,ಎಲ್. ಘಟಕದಲ್ಲಿ ಭಾರೀ ಶಬ್ದದೊಂದಿಗೆ ಸ್ಫೋಟ : 9 ಮಂದಿಗೆ ಗಾಯ, ಸ್ಥಳೀಯರಲ್ಲಿ ಆತಂಕ, ಅಧಿಕಾರಿಗಳ ಭೇಟಿ, ಪರಿಶೀಲನೆ - Karavali Times

728x90

30 September 2026

ಎಂ.ಆರ್.ಪಿ,ಎಲ್. ಘಟಕದಲ್ಲಿ ಭಾರೀ ಶಬ್ದದೊಂದಿಗೆ ಸ್ಫೋಟ : 9 ಮಂದಿಗೆ ಗಾಯ, ಸ್ಥಳೀಯರಲ್ಲಿ ಆತಂಕ, ಅಧಿಕಾರಿಗಳ ಭೇಟಿ, ಪರಿಶೀಲನೆ

ಮಂಗಳೂರು, ಸೆಪ್ಟೆಂಬರ್ 30, 2026 (ಕರಾವಳಿ ಟೈಮ್ಸ್) : ಮಂಗಳೂರಿನ ಜೋಕಟ್ಟೆ ಎಂ ಆರ್ ಪಿ ಎಲ್ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕ (ಸಿ ಎಚ್ ಟಿ ಯು) ದಲ್ಲಿ ಸೆ 30 ರಂದು ಮಧ್ಯಾಹ್ನ 12.15 ರ ವೇಳೆಗೆ ಸ್ಪೋಟ ಸಂಭವಿಸಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಸ್ಫೋಟ ಕಾರಣದಿಂದ ಪರಿಸರದಲ್ಲಿ ಭಾರೀ ಶಬ್ದ ಹಾಗೂ ಹೊಗೆ ಕಂಡು ಬಂದಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವೆಡೆಗಳಿಂದ ಧಾವಿಸಿದ ಅಗ್ನಿಶಾಮಕ ವಾಹನಗಳು ಸತತ ಕಾರ್ಯಾಚರಣೆ ನಡೆಸಿ ಸದ್ಯ ಬೆಂಕಿಯನ್ನು ನಂದಿಸಲಾಗಿದೆ. ಸ್ಫೋಟದ ಶಬ್ದ ಅಂಗರಗುಂಡಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ, ಕುಳಾಯಿವರೆಗೆ ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ರಾಜೇಶ್ ಬ್ಯಾಪ್ಟಿಸ್ಟ್ ಎಂಬವರು ಶೇ. 35ರಷ್ಟು ಸುಟ್ಟಗಾಯಗಳಿಗೆ ಒಳಗಾಗಿದ್ದು, ಚಿಕಿತ್ಸೆಗಾಗಿ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

ಪಕ್ಕದ ಕಚೇರಿಯಲ್ಲಿದ್ದ ಇತರ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರು ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಮತ್ತು ತಪಾಸಣೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೆÇಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಅವರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಸಕಾಲದಲ್ಲಿ ನಿಭಾಯಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಎಂ.ಆರ್.ಪಿ,ಎಲ್. ಘಟಕದಲ್ಲಿ ಭಾರೀ ಶಬ್ದದೊಂದಿಗೆ ಸ್ಫೋಟ : 9 ಮಂದಿಗೆ ಗಾಯ, ಸ್ಥಳೀಯರಲ್ಲಿ ಆತಂಕ, ಅಧಿಕಾರಿಗಳ ಭೇಟಿ, ಪರಿಶೀಲನೆ Rating: 5 Reviewed By: karavali Times
Scroll to Top