ಗಾಂಧೀಜಿ, ಅಂಬೇಡ್ಕರ್ ಅವರಂತಹ ಮಹನೀಯರ ಜೀವನ ಚರಿತ್ರೆ ಓದಿಕೊಳ್ಳುವ ಮೂಲಕ ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು : ಸಚಿವ ಖಾದರ್ ಸಲಹೆ - Karavali Times ಗಾಂಧೀಜಿ, ಅಂಬೇಡ್ಕರ್ ಅವರಂತಹ ಮಹನೀಯರ ಜೀವನ ಚರಿತ್ರೆ ಓದಿಕೊಳ್ಳುವ ಮೂಲಕ ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು : ಸಚಿವ ಖಾದರ್ ಸಲಹೆ - Karavali Times

728x90

15 September 2026

ಗಾಂಧೀಜಿ, ಅಂಬೇಡ್ಕರ್ ಅವರಂತಹ ಮಹನೀಯರ ಜೀವನ ಚರಿತ್ರೆ ಓದಿಕೊಳ್ಳುವ ಮೂಲಕ ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು : ಸಚಿವ ಖಾದರ್ ಸಲಹೆ

ಮಂಗಳೂರು, ಸೆಪ್ಟೆಂಬರ್ 15, 2026 (ಕರಾವಳಿ ಟೈಮ್ಸ್) : ಪ್ರಜಾಪ್ರಭುತ್ವ ವ್ಯವಸ್ಥೆಯು ಸಹಬಾಳ್ವೆ ಮತ್ತು ಸಮಾನ ಅವಕಾಶ ಆಶಯವನ್ನು ಹೊಂದಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಉನ್ನತ ಸ್ಥಾನಕ್ಕೆ ತಲುಪಲು ಅವಕಾಶ ಕಲ್ಪಿಸುವುದು ಪ್ರಜಾಪ್ರಭುತ್ವದ ಉದ್ದೇಶವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್  ಹೇಳಿದರು. 

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಸೆ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ‘ಯುವ ಸಂಸತ್ತು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,      ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮಹತ್ವ ತಿಳಿದುಕೊಳ್ಳಬೇಕು. ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ಮಹನೀಯರ ಜೀವನ ಚರಿತ್ರೆ ಓದಿಕೊಳ್ಳುವ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಯುವಜನರು ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ವಿಚಾರಧಾರೆಗಳನ್ನು ತಿಳಿದುಕೊಳ್ಳುವ ಮೂಲಕ ಭವ್ಯ ಭಾರತದ ಸತ್ಪ್ರಜೆಗಳಾಗಬೇಕು ಎಂದರು. 

ಭಾರತದ ಸಂವಿಧಾನ ವಿಶ್ವದಲ್ಲೇ ವಿಶಿಷ್ಟವಾದದ್ದು. ಸಮಾಜದಲ್ಲಿರುವ ಪ್ರತಿಯೊಬ್ಬರೂ ಕೂಡ ನಿರ್ಭಯವಾಗಿ ಬದುಕಲು ಹಾಗೂ ತಮ್ಮ ಹಕ್ಕುಗಳನ್ನು ಅನುಭವಿಸಲು ಸಂವಿಧಾನ ನೀಡಿರುವ ಭದ್ರತೆ ಪ್ರಮುಖ ಕಾರಣವಾಗಿದೆ ಎಂದ ಅವರು, ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳನ್ನು ಯಾವುದೇ ರೀತಿಯ ತಾರತಮ್ಯವಿಲ್ಲದೆ ನ್ಯಾಯಯುತವಾಗಿ ಅರ್ಹತೆಗನುಗುಣವಾಗಿ ಒದಗಿಸುವ ವ್ಯವಸ್ಥೆ ಪ್ರಜಾಪ್ರಭುತ್ವದಲ್ಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಪ್ರಮುಖ ಆಧಾರವಾಗಿದ್ದು, ಈ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು. 

ಈ ಸಂದರ್ಭ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಪೆÇ್ರಬೆಶನರಿ ಐ.ಎ.ಎಸ್ ಅಧಿಕಾರಿ ಅರ್ಚಿತ್ ಡೊಂಗ್ರೆ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೆÇೀಲಿಸ್ ಅಧೀಕ್ಷಕ ಸೈಮನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ಬಿ.ಎಸ್ ಹೇಮಲತಾ ಮೊದಲಾದವರು ಭಾಗವಹಿಸಿದ್ದರು. ಮಂಗಳೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಗಾಂಧೀಜಿ, ಅಂಬೇಡ್ಕರ್ ಅವರಂತಹ ಮಹನೀಯರ ಜೀವನ ಚರಿತ್ರೆ ಓದಿಕೊಳ್ಳುವ ಮೂಲಕ ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು : ಸಚಿವ ಖಾದರ್ ಸಲಹೆ Rating: 5 Reviewed By: karavali Times
Scroll to Top