ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು - Karavali Times ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು - Karavali Times

728x90

22 September 2026

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಮಂಗಳೂರು, ಸೆಪ್ಟೆಂಬರ್ 22, 2026 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯ ಎಂಬಲ್ಲಿ 2019 ರ ಸೆ 3 ರಂದು ಕಾರ್ತಿಕ್ ಮೇರ್ಲ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. 

ಶಿಕ್ಷೆಗೊಳಗಾದ ಅಪರಾಧಿಗಳನ್ನು ಪ್ರೀತು ಅಲಿಯಾಸ್ ಪ್ರೀತೇಶ್ ಸುಲಾಯ ಹಾಗೂ ಕಿರಣ್ ಅಲಿಯಾಸ್ ಮಣಿ ಎಂದು ಹೆಸರಿಸಲಾಗಿದೆ. ಪ್ರಕರಣದ ತನಿಖೆ ನಡೆಸಿದ ಆಗಿನ ತನಿಖಾಧಿಕಾರಿಗಳು ಹಾಗೂ ಪೆÇಲೀಸ್ ಇನ್ಸ್ ಪೆಕ್ಟರ್ ಆಗಿದ್ದ ನಾಗೇಶ್ ಕದ್ರಿ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಆರೋಪಿಗಳಾದ ಪ್ರೀತು ಅಲಿಯಾಸ್ ಪ್ರೀತೇಶ್ ಸುಲಾಯ, ಚರಣ್, ಕಿರಣ್ ಅಲಿಯಾಸ್ ಮಣಿ ಹಾಗೂ ಸಂತು ಅಲಿಯಾಸ್ ಸ್ಟಿವನ್ ಮಾಂತೇರೋ ಎಂಬವರುಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. 

ಪ್ರಕರಣದ ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಯ್ಕ್ ಅವರು ಪ್ರೀತು ಅಲಿಯಾಸ್ ಪ್ರೀತೇಶ್ ಸುಲಾಯ ಹಾಗೂ ಕಿರಣ್ ಅಲಿಯಾಸ್ ಮಣಿ ಎಂಬವರುಗಳ ವಿರುದ್ಧ ಆರೊಪಿಗಳು ಸಾಬೀತಾದ ಹಿನ್ನೆಲೆಯಲ್ಲಿ 302 ಐಪಿಸಿಯಲ್ಲಿ ಜೀವಾವಧಿ ಶಿಕ್ಷೆ, 3 ಲಕ್ಷ ರೂಪಾಯಿ ದಂಡ, 341 ಐಪಿಸಿ ರಲ್ಲಿ 3 ತಿಂಗಳು ಸದಾ ಶಿಕ್ಷೆ, 500 ರೂಪಾಯಿ ದಂಡ ವಿಧಿಸಿದೆ. 

ಆರೋಪಿಗಳ ಪೈಕಿ ಸಂತು ಅಲಿಯಾಸ್ ಸ್ಟಿವನ್ ಮಾಂತೇರೋನನ್ನು ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದ್ದು, ಮತ್ತೋರ್ವ ಚರಣ್ ಎಂಬಾತನು ಈಗಾಗಲೇ ಮೃತಪಟ್ಟಿರುತ್ತಾನೆ. ಸರ್ಕಾರಿ ಅಭಿಯೋಜಕರಾಗಿ ಜಯಂತಿ ಕೆ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು Rating: 5 Reviewed By: karavali Times
Scroll to Top