ಮಂಗಳೂರು, ಸೆಪ್ಟೆಂಬರ್ 08, 2026 (ಕರಾವಳಿ ಟೈಮ್ಸ್) : ಮಂಗಳೂರು ಉತ್ತರ ಪೊಲೀಸ್ ಠಾಣಾ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲ-ಮುಕ್ಕಚ್ಚೇರಿ ಕಿಲೇರಿಯಾ ನಗರ ನಿವಾಸಿ ಎಂ ಶಾಫಿ ಎಂಬವರ ಪುತ್ರ ಅಶ್ಪಾಕ್ (34) ಎಂದು ಹೆಸರಿಸಲಾಗಿದೆ. ಈತನ ವಿರುದ್ದ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 197/2017 ಕಲಂ 143, 147, 341, 504, 323, 506, 307, ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣವು ಮಂಗಳೂರು 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ ಸಿ ನಂಬ್ರ 5442/2018 ರಂತೆ ವಿಚಾರಣೆಯಲ್ಲಿರುತ್ತದೆ, ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆತನಿಗೆ ಎಲ್ ಪಿ ಸಿ ವಾರೆಂಟ್ ಹೊರಡಿಸಿತ್ತು.
ಈತನನ್ನು ಮಂಗಳೂರು ಉತ್ತರ ಠಾಣಾ ಪೊಲೀಸರು ಸೆ 8 ರಂದು ಪತ್ತೆ ಮಾಡಿ ದಸ್ತಗಿರಿ ಮಾಡಿದ್ದಾರೆ. ಈತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.











0 comments:
Post a Comment