ಮಂಗಳೂರು, ಸೆಪ್ಟೆಂಬರ್ 03, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕ ಫಲಾನುಭವಿಗಳ ನೋಂದಣಿ, ನವೀಕರಣ ಮತ್ತು ವಿವಿಧ ಬಗೆಯ ಸೌಲಭ್ಯಗಳನ್ನು ಕೋರಿ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿಗೆ ಸಲ್ಲಿಸಿರುವ ಅರ್ಜಿಗಳ ಸಂಬಂಧ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೊಂಚಾಡಿ ಶರ್ಬತ್ ಕಟ್ಟೆ ಕಾರ್ಮಿಕ ಭವನದಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿ ನ್ಯಾಯಾಲಯ ಕೊಠಡಿಯಲ್ಲಿ ಅದಾಲತ್ ನಡೆಸಲಾಗುತ್ತದೆ.
ಕಟ್ಟಡ ಕಾರ್ಮಿಕ ಫಲಾನುಭವಿಗಳು ಅದಾಲತ್ತಿನ ಪ್ರಯೋಜನ ಪಡೆಯುವಂತೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











0 comments:
Post a Comment