ಮಂಗಳೂರು, ಸೆಪ್ಟೆಂಬರ್ 15, 2026 (ಕರಾವಳಿ ಟೈಮ್ಸ್) : ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡ್ಯಿವರು ಸೆಪ್ಟೆಂಬರ್ 16 ರಿಂದ 18 ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆಪ್ಟೆಂಬರ್ 16 ರಂದು ರಾತ್ರಿ 7.45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 17 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10ಕ್ಕೆ ಪಡೀಲ್ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ, ಸಂಜೆ 6 ಗಂಟೆಗೆ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ.
















0 comments:
Post a Comment