ಮಂಗಳೂರು, ಸೆಪ್ಟೆಂಬರ್ 16, 2026 (ಕರಾವಳಿ ಟೈಮ್ಸ್) : ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಸೆಪ್ಟೆಂಬರ್ 17 ಮತ್ತು 18 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆಪ್ಟೆಂಬರ್ 17 ರಂದು ಮಧ್ಯಾಹ್ನ 3:35 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಸಚಿವರು, ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆ. 18 ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ, ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಮಾಜ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚೆ, ರಾತ್ರಿ 11.05ಕ್ಕೆ ಸಚಿವರು ಬೆಂಗಳೂರಿಗೆ ನಿರ್ಗಮಿಸುವರು.
ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಸೆಪ್ಟೆಂಬರ್ 17 ರಂದು ಬೆಳಿಗ್ಗೆ 10ಕ್ಕೆ ಮಂಗಳೂರು ಮಹಾನಗರಪಾಲಿಕೆ ಮಂಗಳ ಸಭಾಂಗಣದಲ್ಲಿ ಮಂಗಳೂರು ಮಹಾನಗರಪಾಲಿಕೆ ಹಾಗೂ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಹಾಗೂ ಕರ್ನಾಟಕ ನಗರ ಮೂಲಭೂತ ಸೌಕರ್ಯಭಿವೃದ್ಧಿ ಮತ್ತು ಹಣಕಾಸು ನಿಗಮದ ಪ್ರಗತಿ ಪರಿಶೀಲನಾ ಸಭೆ ಮತ್ತು ಮಧ್ಯಾಹ್ನ 2ಕ್ಕೆ ಕಾಮಗಾರಿಗಳ ಪರಿಶೀಲನೆ, ಅಪರಾಹ್ನ 3 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಗೆ ಭೇಟಿ ಹಾಗೂ ಸಂಸದರು, ಶಾಸಕರು ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ, ಸಂಜೆ 5ಕ್ಕೆ ತುಳು ಭವನದಲ್ಲಿ ಸ್ಥಳೀಯ ಮುಖಂಡರೊಂದಿಗೆ ಸಭೆ. ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ, ಸಂಜೆ 6.10ಕ್ಕೆ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೆಪ್ಟೆಂಬರ್ 17 ಮತ್ತು 18 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 17 ಮಧ್ಯಾಹ್ನ 3.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಸಂಜೆ 4 ಗಂಟೆಗೆ ಬಜಪೆಯಲ್ಲಿ ಕರ್ನಾಟಕ ರಾಜ್ಯ ಹಜ್ ಮಂಡಳಿಯ ನೂತನ “ಹಜ್ ಭವನ” ಶಂಕುಸ್ಥಾಪನೆ, 6ಕ್ಕೆ ಉಳ್ಳಾಲ ಜುಮ್ಮಾ ಮಸೀದಿ ಭೇಟಿ ಬಳಿಕ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ 18 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಂಪುಟ ಸಭೆ, ಮಧ್ಯಾಹ್ನ 1ಕ್ಕೆ ಪಡೀಲ್ ಜುಮ್ಮಾ ಮಸೀದಿಯಲ್ಲಿ ನಮಾಝ್, ಮಧ್ಯಾಹ್ನ 2 ಗಂಟೆಗೆ ಕಣ್ಣೂರಿನ ಮರ್ಕಜ್ ಅಲ್ ಇಸ್ಲಾಂ ಸಂಸ್ಥೆಗೆ ಭೇಟಿ, 2.30ಕ್ಕೆ ಬಂಟ್ವಾಳ ತಾಲೂಕಿನ ನಂದಾವರದಲ್ಲಿರುವ ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ನಿವಾಸಕ್ಕೆ ಸೌಹಾರ್ದ ಭೇಟಿ, ಸಂಜೆ 6.10ಕ್ಕೆ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
















0 comments:
Post a Comment