ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ - Karavali Times ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ - Karavali Times

728x90

19 September 2026

ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

 ಬಂಟ್ವಾಳ, ಸೆಪ್ಟೆಂಬರ್ 19, 2026 (ಕರಾವಳಿ ಟೈಮ್ಸ್) : ಪೋಕ್ಸೋ ಪ್ರಕರಣದ ಆರೋಪಿಯೋರ್ವನಿಗೆ ಜಿಲ್ಲಾ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಅಪರಾಧಿಯನ್ನು ಬೆಳ್ತಂಗಡಿ-ಗುರುವಾಯನಕೆರೆ ನಿವಾಸಿ ಅಬ್ದುಲ್ ಲತೀಫ್ ಎಂದು ಹೆಸರಿಸಲಾಗಿದೆ. 

ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ವರದಿಯಾಗಿದ್ದ ಪೆÇೀಕ್ಸೋ ಪ್ರಕರಣದಲ್ಲಿ ತನಿಖಾಧಿಕಾರಿ ಹಾಗೂ ಬಂಟ್ವಾಳ ನಗರ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಆಗಿದ್ದ ಅನಂತ ಪದ್ಮನಾಭ ಅವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಆರೋಪಿ ಅಬ್ದುಲ್ ಲತಿಫ್  ಹಾಗೂ ಇತರೆ ಇಬ್ಬರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ-2 ಮಂಗಳೂರು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿ ಅಬ್ದುಲ್ ಲತಿಫ್ ಎಂಬಾತನ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಮಾನು ಕೆ ಎಸ್ ಅವರು ಸೆ 19 ರಂದು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು 80 ಸಾವಿರ ರೂಪಾಯಿ ದಂಡ ವಿಧಿಸಿ ಅದೇಶ ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ಅವರು ನ್ಯಾಯಲಯದಲ್ಲಿ ವಾದ ಮಂಡಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ Rating: 5 Reviewed By: karavali Times
Scroll to Top