ಬಂಟ್ವಾಳ, ಸೆಪ್ಟೆಂಬರ್ 08, 2026 (ಕರಾವಳಿ ಟೈಮ್ಸ್) : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿಗಳನ್ನು ಜವಾದ್, ಶಾಹಿದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಎಂದು ಹೆಸರಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂತ್ರಸ್ತ ಬಾಲಕ ನೀಡಿದ ದೂರಿನಂತೆ ಬಾಲಕನಿಗೆ ಫೆಬ್ರವರಿ ತಿಂಗಳಿನಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಬಂಧಿತ ಮೂವರ ಸಹಿತ ಇತರ ಮೂರು ಮಂದಿ ಆರೋಪಿಗಳು ಸೇರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 185/2026, 186/2026, 187/2026, 188/2026, 189/2026 ಹಾಗೂ 190/2026, ಕಲಂ: 4(2), 5(ಎಂ), 6, 8 ಪೆÇೀಕ್ಸೋ ಕಾಯ್ದೆ-2012 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಪೈಕಿ ಮೂವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.













0 comments:
Post a Comment