ಶಾಲಾ ಮಕ್ಕಳ ಸುರಕ್ಷತೆಗೆ ಶಾಲಾ ಬಸ್ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ - Karavali Times ಶಾಲಾ ಮಕ್ಕಳ ಸುರಕ್ಷತೆಗೆ ಶಾಲಾ ಬಸ್ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ - Karavali Times

728x90

2 September 2026

ಶಾಲಾ ಮಕ್ಕಳ ಸುರಕ್ಷತೆಗೆ ಶಾಲಾ ಬಸ್ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ

ಮಂಗಳೂರು, ಸೆಪ್ಟೆಂಬರ್ 02, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಸಂಚಾರ ಪೆÇಲೀಸ್ ವತಿಯಿಂದ ಶಾಲಾ ಮಕ್ಕಳ ಬಸ್ ಸುರಕ್ಷತೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ನಗರದ ಪುರಭವನದಲ್ಲಿ ಸೆಪ್ಟೆಂಬರ್ 2 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ನಗರದ ವಿವಿಧ ಶಾಲೆಗಳ ಶಾಲಾ ಬಸ್ ಚಾಲಕರು, ಮಾಲಿಕರು, ಬಸ್ ಮ್ಯಾನೇಜರ್ ಗಳು ಹಾಗೂ ಶಾಲಾ ಆಡಳಿತ ಮಂಡಳಿಯ ಸುಮಾರು 600 ಮಂದಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಮುಖ್ಯವಾಗಿ ಶಾಲಾ ಬಸ್ ಚಾಲಕರು ಹಾಗೂ ನಿರ್ವಾಹಕರು ಪಾಲಿಸಬೇಕಾದ ಕಾನೂನು ನಿಯಮಗಳು, ರಸ್ತೆ ಸುರಕ್ಷತಾ ಕ್ರಮಗಳು, ಸಂಚಾರ ನಿಯಮಗಳು ಹಾಗೂ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಜವಾಬ್ದಾರಿಗಳ ಕುರಿತು ಸಮಗ್ರವಾಗಿ ತಿಳುವಳಿಕೆ ನೀಡಲಾಯಿತು.

ಅದೇ ರೀತಿ, ಶಾಲಾ ಆಡಳಿತ ಮಂಡಳಿಯವರು ಶಾಲಾ ವಾಹನಗಳ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಚಾಲಕರು ಹಾಗೂ ನಿರ್ವಾಹಕರ ಕರ್ತವ್ಯಗಳನ್ನು ಸಮರ್ಪಕವಾಗಿ ಮೇಲ್ವಿಚಾರಣೆ ಮಾಡುವುದು ಮತ್ತು ಶಾಲಾ ಮಕ್ಕಳ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು. ಅಲ್ಲದೇ, ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಶಾಲಾ ಬಸ್ ಚಾಲಕರ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಲಾಯಿತು. ಕಾರ್ಯಕ್ರಮದ ಸಂದರ್ಭದಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಪಾಲನೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಡಿ.ಸಿ.ಪಿ. (ಅಪರಾಧ ಮತ್ತು ಸಂಚಾರ) ಅವರು ಮಾತನಾಡಿ ಕರ್ನಾಟಕ ಮೋಟಾರ್ ವೆಹಿಕಲ್ಸ್ (ಕಂಡಿಷನ್ ಫಾರ್ ವೆಹಿಕಲ್ ಎಂಗೇಜ್ಡ್ ಇನ ಟ್ರಾನ್ಸ್ ಪೋರ್ಟ್ ಆಫ್ ಸ್ಕೂಲ್ ಚಿಲ್ಡ್ರನ್) ರೂಲ್ಸ್ 2012 ರಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಶಾಲಾ/ ಕಾಲೇಜು ಸ್ಕೂಲ್ ಕ್ಯಾಬ್ ಸೇಫ್ಟಿ ಕಮಿಟಿಯು ವಾಹನ ಮತ್ತು ಚಾಲಕರ ನೈಜ್ಯ ದಾಖಲೆಗಳು, ಫಿಟ್ನೆಸ್, ವಿಮೆ, ಅಗ್ನಿಶಾಮಕ ಉಪಕರಣ, ಸ್ಪೀಡ್ ಗವರ್ನರ್ ಹಾಗೂ ಕ್ಲೋಸ್ಟ್ ಬಾಡಿ ಹೊಂದಿರುವಂತೆ, ಶಾಲಾ ವಾಹನದ ಗರಿಷ್ಠ ವೇಗ ಗಂಟೆಗೆ 40 ಕಿ.ಮೀ. ಸಂಚರಿಸುವಂತೆ ಸೂಚನೆ ನೀಡಿದರು. 

ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿ ಮಾತನಾಡಿ, ಪರ್ಮಿಟ್ ಹೊಂದಿರುವ ವಾಹನಗಳು ಮಾತ್ರ ಮಕ್ಕಳನ್ನು ಸಾಗಿಸುವುದು ಮತ್ತು ಇತರೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸೂಚಿಸಿದರು. 

ಶಿಕ್ಷಣಾಧಿಕಾರಿಯವರು ಶಾಲಾ ಆಡಳಿತ ಮಂಡಳಿಯವರಿಗೆ ಶಾಲಾ ಮಕ್ಕಳ ಸುರಕ್ಷತೆಯ ಬಗ್ಗೆ ಆಗಾಗ ಶಿಕ್ಷಕರು ಶಾಲಾ ಬಸ್ಸು ಮಾಲಕರು/ ಚಾಲಕರು, ಪೆÇೀಷಕರ ಸಭೆ ನಡೆಸಿ ಸುರಕ್ಷತೆಯ ಬಗ್ಗೆ ಚರ್ಚಿಸಿ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು. 

ಸಂಚಾರ ವಿಭಾಗದ ಎ.ಸಿ.ಪಿ. ಅವರು ಚಾಲಕರು ಸಂಚಾರ ನಿಯಮವನ್ನು ಪಾಲಿಸುವುದಲ್ಲದೇ ಶಿಸ್ತು ಮತ್ತು ಜವಾಬ್ದಾರಿಯಿಂದ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಮಂಗಳೂರು ನಗರ ಸಂಚಾರ ಪೆÇಲೀಸ್ ಠಾಣೆಗಳ ಎಲ್ಲಾ ಠಾಣಾಧಿಕಾರಿಗಳು, ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಶಾಲಾ ಮಕ್ಕಳ ಸುರಕ್ಷತೆಗೆ ಶಾಲಾ ಬಸ್ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಜಾಗೃತಿ ಕಾರ್ಯಕ್ರಮ Rating: 5 Reviewed By: karavali Times
Scroll to Top