ಬಂಟ್ವಾಳ, ಸೆಪ್ಟೆಂಬರ್ 11, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಇವುಗಳ ವತಿಯಿಂದ ಬಂಟ್ವಾಳ ನಗರ ವಲಯ ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಬಿ ಸಿ ರೋಡಿನ ಬಿ ಮೂಡ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸೆ 11 ರಂದು ನಡೆಯಿತು.
ಪಂದ್ಯಾಕೂಟ ಉದ್ಘಾಟಿಸಿದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಮಾತನಾಡಿ, ಶಿಕ್ಷಣಕ್ಕೆ ಪೂರಕವಾಗಿ, ಕ್ರೀಡೆಯ ಒಂದು ಭಾಗವಾಗಿರುವ ವಾಲಿಬಾಲ್ ಪಂದ್ಯಾಟವನ್ನು ಬಿ ಮೂಡ ಶಾಲೆಯಲ್ಲಿ ಆಯೋಜಿಸಲಾಗಿದೆ. ಇರುವ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಂಡು ತಾಲೂಕು ಮಟ್ಟದ ಕ್ರೀಡಾಕೂಟ ರೀತಿಯಲ್ಲಿ ಏರ್ಪಡಿಸಿರುವ ಬಿ ಮೂಡ ಶಾಲೆಯ ಶಿಕ್ಷಕ ವೃಂದ ಮತ್ತು ಎಸ್ ಡಿ ಎಂ ಸಿ ಸದಸ್ಯರುಗಳು ಅಭಿನಂದನಾರ್ಹರು. ಗೆಲುವು, ಸೋಲು ಎಂಬುದು ಇದ್ದದ್ದೇ. ಭಾಗವಹಿಸುವಿಕೆಯ ಮೂಲಕ ಹೊಸ ಅನುಭವ ಪಡೆದುಕೊಳ್ಳಲು ಸಾಧ್ಯವಾಗುತ್ತದೆ, ತಾಲೂಕಿನಲ್ಲಿ ಉತ್ತಮ ಹೆಸರುಗಳಿಸಲು ಪ್ರಯತ್ನಿಸಿ ಎಂದರು.
ಬಿ ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ವಿನೋದ್ಯಾ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗಣೇಶ್ ಕಾಮಾಜೆ, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ರೈ, ಬಂಟ್ವಾಳ ತಾಲೂಕು ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ, ನೋಡೆಲ್ ಶಿಕ್ಷಕರಾದ ಜಯಂತ್ ಪೆÇಳಲಿ, ಚಂದ್ರಹಾಸ ಶೆಟ್ಟಿ, ಅಜ್ಜಿಬೆಟ್ಟು ಸರಕಾರಿ ಹೈಸ್ಕೂಲ್ ಮುಖ್ಯ ಶಿಕ್ಷಕಿ ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಇಸಿಒಗಳಾದ ರಮಾನಂದ, ಪ್ರತಿಮಾ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಶಶಿಧರ್ ಕೈಕುಂಜೆ ಮೊದಲಾದವರು ಭಾಗವಹಿಸಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಸ್ವಾಗತಿಸಿ, ಶಿವಮೂರ್ತಿ ಆರ್ ವಂದಿಸಿದರು. ಶಿಕ್ಷಕಿ ಸುಶೀಲಾ ಲಿಂಗಪ್ಪ ಕಾರ್ಯಕ್ರಮ ನಿರೂಪಿಸಿದರು. ನಗರ ವಲಯದ 23 ತಂಡಗಳು ವಾಲಿಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿತ್ತು.












0 comments:
Post a Comment