ಬಂಟ್ವಾಳ, ಸೆಪ್ಟೆಂಬರ್ 29, 2026 (ಕರಾವಳಿ ಟೈಮ್ಸ್) : ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಮಹಿಳೆಗೆ ಸ್ಕೂಟರ್ ಡಿಕ್ಕಿ ಹೊಡೆದು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟ ಘಟನೆ ಸೆ 28 ರಂದು ಸಂಭವಿಸಿದೆ.
ಮೃತರನ್ನು ಫಾತಿಮತ್ ಜೊಹರಾ (51) ಎಂದು ಹೆಸರಿಸಲಾಗಿದೆ. ಇವರು ಸೆ 27 ರಂದು ಸಂಜೆ 7 ಗಂಟೆ ವೇಳೆ ರಸ್ತೆ ದಾಟುತ್ತಿದ್ದ ವೇಳೆ ಬಿ ಸಿ ರೋಡು ಕಡೆಯಿಂದ ಮಂಗಳೂರು ಕಡೆಗೆ ಮುಹಮ್ಮದ್ ಹಾಫೀನ್ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೆ 28 ರಂದು ಬೆಳಿಗ್ಗೆ 8.30ರ ವೇಳೆಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಸಂಬಂಧಿ ನಾಟೆಕಲ್ ನಿವಾಸಿ ಅಬ್ದುಲ್ ಫವಾಜ್ (41) ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













0 comments:
Post a Comment