ಬಂಟ್ವಾಳ, ಸೆಪ್ಟೆಂಬರ್ 16, 2026 (ಕರಾವಳಿ ಟೈಮ್ಸ್) : ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ 720.47 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, 2,19,28,344.49 ಕೋಟಿ ರೂಪಾಯಿ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದರು.
ಸೆ 16 ರಂದು ಸಂಘದ ಪ್ರಧಾನ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಸಂಘವು 1947ರಲ್ಲಿ ಆಗಿನ ಸಹಕಾರಿ ಬಂಧುಗಳ ನೆರವಿನಿಂದ ಬಿ ಕೃಷ್ಣ ರೈ ರವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದ್ದು, ಸಂಘವು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮ ಸೇರಿದಂತೆ ಬಂಟ್ವಾಳ ತಾಲೂಕಿನ 7 ಗ್ರಾಮಗಳೊಂದಿಗೆ ಒಟ್ಟಾರೆ 8 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದೆ. ಆಡಳಿತ ಮಂಡಳಿಯ ನಿರ್ದೇಶಕರ, ಸಿಬ್ಬಂದಿಗಳ ಹಾಗೂ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ಎಲ್ಲರಿಗೂ ತೃಪ್ತಿಕರವಾದ ಸೇವೆಯನ್ನು ನೀಡುತ್ತಾ ಬಂದಿದ್ದು, ಕಳೆದ 79 ವರ್ಷಗಳಿಂದ ಕಾರ್ಯಾಚರಿಸುತ್ತಾ ಅಭಿವೃದ್ದಿಯಲ್ಲಿ ಮುನ್ನಡೆಯುತ್ತಿದೆ ಎಂದರು.
2025-26 ನೇ ವರ್ಷದಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು 133.63 ಕೋಟಿ ರೂಪಾಯಿ ಸಾಲ ವಿತರಿಸಲಾಗಿದ್ದು, ಹೊರ ಬಾಕಿ ಸಾಲವು 133.63 ಕೋಟಿ ಆಗಿದೆ. ವಿತರಿಸಿದ ಸಾಲದಲ್ಲಿ ಶೇ 98% ರಷ್ಟು ವಸೂಲಾತಿಯಾಗಿರುತ್ತದೆ. 2025-26ನೇ ಸಾಲಿನ ವರ್ಷಾಂತ್ಯಕ್ಕೆ 69.56 ಕೋಟಿ ಠೇವಣಿ ಹೊಂದಿದ್ದು, ನಮ್ಮ ಸಂಘವು ಕಳೆದ ಹಲವಾರು ವರ್ಷಗಳಿಂದ ಅಡಿಟ್ ವರದಿಯಲ್ಲಿ “ಎ” ಗ್ರೇಡ್ ನಿರಂತರವಾಗಿ ಕಾಯ್ದುಕೊಂಡು ಬರಲಾಗಿದೆ ಎಂದ ಅವರು, ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ನಮ್ಮ ಬ್ಯಾಂಕ್ ಜಿಲ್ಲಾ ಮಟ್ಟದಲ್ಲಿಯೇ ಗರಿಷ್ಠ ಸಾಧನೆ ಮಾಡಿದೆ ಎಂದರು.
2025-26ನೇ ಸಾಲಿನಲ್ಲಿ 1885 ರೈತರು 2395.78 ಎಕ್ರೆ ಜಮೀನಿಗೆ ಸಂಬಂಧಿಸಿದಂತೆ 62.62 ಲಕ್ಷ ರೂಪಾಯಿ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಸಂಬಂಧಿಸಿ ರೈತರಿಂದ ಪ್ರೀಮಿಯಂ ಪಾವತಿಸಲಾಗಿದೆ. ಕಳೆದ ವರ್ಷ ನಮ್ಮ ಸಂಘದ ವ್ಯಾಪ್ತಿಯ ಸದಸ್ಯರು ಸುಮಾರು 5-6 ಕೋಟಿ ಬೆಳೆವಿಮೆ ಪರಿಹಾರ ಪಡೆದಿರುತ್ತಾರೆ. ಇದರಿಂದ ನಮ್ಮ ಸಂಘವು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವ ಬೆರಳೆಣಿಕೆಯ ಸಹಕಾರಿ ಸಂಘಗಳಲ್ಲಿ ನಮ್ಮ ಸಂಘವು ಒಂದಾಗಿದೆ ಎಂದ ಪ್ರಭಾಕರ ಪ್ರಭು, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಪುರಸ್ಕರಿಸಲಾಗಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದವರನ್ನು ಸಂಘವು ಗೌರವಿಸಿದೆ.
ಸಂಘದ ವತಿಯಿಂದ ‘ರೈತ ಕಲ್ಯಾಣ ನಿಧಿ” ಯೋಜನೆ ಸ್ಥಾಪಿಸಲಾಗಿದ್ದು, ಸಂಘದಿಂದ ಬೆಳೆ ಸಾಲ ಪಡೆದ ಸದಸ್ಯರು ಮರಣ ಹೊಂದಿದ್ದಲ್ಲಿ, ಅವರ ಕುಟುಂಬಕ್ಕೆ ಸಂಘದ ವತಿಯಿಂದ ನೆರವಾಗುವ ದೃಷ್ಠಿಯಲ್ಲಿ ‘ರೈತ ಕಲ್ಯಾಣ ನಿಧಿ” ಯೋಜನೆಯ ಮೂಲಕ 10 ಸಾವಿರ ರೂಪಾಯಿಯಂತೆ 38 ಮಂದಿಗೆ ಆರ್ಥಿಕವಾಗಿ ಸಹಕಾರ ನೀಡಲಾಗಿದೆ ಎಂದರು.
ಸಂಘದ ವತಿಯಿಂದ ನ್ಯಾಯಬೆಲೆ ಅಂಗಡಿ ಸ್ಥಾಪಿಸಿ ಹೆಚ್ಚಿನ ಲಾಭವಿಲ್ಲದಿದ್ದರೂ ಪಡಿತರ ವಿತರಣೆ ಮಾಡಲಾಗುತ್ತಿದೆ. ನ್ಯಾಯಬೆಲೆ ಅಂಗಡಿಯ ಮೂಲಕ ಸಂಘದಲ್ಲಿ ಪಡಿತರ ಸಾಮಾಗ್ರಿಗಳನ್ನು ಸಮರ್ಪಕವಾಗಿ ವಿತರಿಸಲಾಗಿದ್ದು, ಸಂಘದಲ್ಲಿ ನೇತಾಜಿ ಬಹುಪಯೋಗಿ ಸೇವಾಕೇಂದ್ರದ ಹೆಸರಿನಲ್ಲಿ ಗೋದಾಮು ಕಟ್ಟಡ ಇದ್ದು, ಇದರ ಮೂಲಕ ರಾಸಾಯನಿಕ ಗೊಬ್ಬರ, ಸಾವಯವ ಗೊಬ್ಬರ, ಮೈಲು ತ್ತುತ್ತು, ಸುಣ್ಣ ಸೇರಿದಂತೆ ರೈತರಿಗೆ ಬೇಕಾಗುವ ಉತ್ತಮ ಗುಣಮಟ್ಟದ ಕೃಷಿ ಉಪಯುಕ್ತ ಉಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳನ್ನು ಯೋಗ್ಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ರಿಯಾಯಿತಿ ದರದಲ್ಲಿ ಮೈಲು ತ್ತುತ್ತು ಹಾಗೂ ಸುಣ್ಣ ನೀಡಲಾಗುತ್ತಿದೆ ಎಂದ ಪ್ರಭು, ಕಡಿಮೆ ಬಡ್ಡಿದರದಲ್ಲಿ ರಾಸಾಯನಿಕ ಗೊಬ್ಬರ ಖರೀದಿಗೆ ಸಾಲವನ್ನೂ ನೀಡಲಾಗುತ್ತಿದೆ ಎಂದರು.
ಈ ಸಲದ ಮಹಾಸಭೆಯಲ್ಲಿ ದೇಶದಲ್ಲಿ ಪಂಚ ಪರಿವರ್ತನೆ ಅನುಷ್ಠಾನದಡಿಯಲ್ಲಿ ಪರಿಸರ ಸಂರಕ್ಷಣೆಗಾಗಿ ಕಲ್ಪನೆಯಡಿಯಲ್ಲಿ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ಹಲಸಿನ ಗಿಡ ನೀಡುವುದರೊಂದಿಗೆ “ಕಾಡುಬೆಳೆಸಿ-ನಾಡು ಉಳಿಸಿ” ಅಭಿಯಾನಕ್ಕೆ ಮಹತ್ವ ನೀಡಲಾಗುತ್ತಿದೆ ಎಂದು ಅಧ್ಯಕ್ಷರು, ಸಿದ್ದಕಟ್ಟೆ ಪ್ರಧಾನ ಕಛೇರಿ ಸೇರಿದಂತೆ, ಸಂಘವು ಆರಂಬೋಡಿ, ರಾಯಿ, ಮಾವಿನಕಟ್ಟೆ, ಅರಳ ಎಂಬಲ್ಲಿ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿದ್ದು, ಸಿ ಸಿ ಕ್ಯಾಮೆರ ಹಾಗೂ ಸೈರನ್ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಹಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಆರ್ ಟಿ ಜಿ ಎಸ್, ನೆಫ್ಟ್ ವ್ಯವಸ್ಥೆಯೊಂದಿಗೆ ಕ್ಯೂ ಆರ್ ಕೋಡ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು.
ಸಾರ್ವಜನಿಕ ಸೇವಾ ಕಾರ್ಯಕ್ರಮಗಳಿಗೆ ಅನೂಕೂಲವಾಗುವಂತೆ ಸಂಘದ ಸ್ಥಾಪಕಾಧ್ಯಕ್ಷ ಬೆಳ್ಳಿಪ್ಪಾಡಿ ಕೃಷ್ಣ ರೈ ಅವರ ಸವಿನೆನಪಿಗಾಗಿ ಅವರ ಹೆಸರಿನಲ್ಲಿ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣ ನಿರ್ಮಿಸಿ ಸೇವಾ ಕಾರ್ಯಕ್ರಮಗಳಿಗೆ ಸಭಾಂಗಣವನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದ ಅವರು. 2025-26ನೇ ಸಾಲಿನ ಸಂಘದ ಮಹಾಸಭೆಯು ಸೆ 19 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಸಂಘದ ಕೇಂದ್ರ ಕಛೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆಯಲಿದ್ದು, ಸಂಘದ ಸದಸ್ಯರು ಮಹಾಸಭೆಯಲ್ಲಿ ಭಾಗವಹಿಸುವಂತೆ ಅವರು ಕೋರಿದ್ದಾರೆ.
ಬ್ಯಾಂಕ್ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೆÇಡುಂಬ, ನಿರ್ದೇಶಕರುಗಳಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಎ ಶಿವ ಗೌಡ, ಶ್ರೀಮತಿ ಮಂದಾರತಿ ಎಸ್ ಶೆಟ್ಟಿ, ಶ್ರೀಮತಿ ಪುಷ್ಪಲತಾ ಎಸ್ ಆರ್, ಕೀರ್ತಿರಾಜ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೆ, ನವೀನ್ ಹೆಗ್ಡೆ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಆರತಿ ಶೆಟ್ಟಿ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮಲ್ಲಿಕಾ ಸುದ್ದಿಗೋಷ್ಠಿಯಲ್ಲಿದ್ದರು.

















0 comments:
Post a Comment