ಸೆ. 19-20 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ : ಮತದಾರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರ ಸೇವೆಗೆ ಅವಕಾಶ - Karavali Times ಸೆ. 19-20 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ : ಮತದಾರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರ ಸೇವೆಗೆ ಅವಕಾಶ - Karavali Times

728x90

16 September 2026

ಸೆ. 19-20 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ : ಮತದಾರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರ ಸೇವೆಗೆ ಅವಕಾಶ

ಮಂಗಳೂರು, ಸೆಪ್ಟೆಂಬರ್ 16, 2026 (ಕರಾವಳಿ ಟೈಮ್ಸ್) : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಎಸ್.ಐ.ಆರ್ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಹಾಗೂ ಮತದಾರರ ಪಟ್ಟಿಯನ್ನು ಶುದ್ದೀಕರಿಸುವ ಉದ್ದೇಶದಿಂದ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಅರ್ಹ ಯುವ ಮತದಾರರು ಸೇರಿದಂತೆ ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದಿರುವ ಅರ್ಹ ನಾಗರಿಕರಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅನುಕೂಲವಾಗುವಂತೆ ಸೆಪ್ಟೆಂಬರ್ 19 ಮತ್ತು 20  ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ವಿಶೇಷ ಅಭಿಯಾನದ ಸಂದರ್ಭದಲ್ಲಿ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಬಿ.ಎಲ್.ಒ ಹಾಗೂ ಸಂಬಂಧಪಟ್ಟ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದು, ಅರ್ಹ ಮತದಾರರಿಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಸಂಬಂಧಿತ ಸೇವೆಗಳ ಕುರಿತು ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಿದ್ದಾರೆ.

18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸು ಹೊಂದಿರುವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳ್ಳಲು ಅರ್ಹರಾಗಿರುವ ಯುವ ನಾಗರಿಕರು, ಈ ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಂಡು ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಗತ್ಯ ಅರ್ಜಿ ಸಲ್ಲಿಸಬೇಕು.

ಜಿಲ್ಲೆಯ ಎಲ್ಲಾ ಅರ್ಹ ಯುವ ಮತದಾರರು ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಬೇಕಿರುವ ಅರ್ಹ ನಾಗರಿಕರು ಸೆಪ್ಟೆಂಬರ್ 19 ಮತ್ತು 20 ರಂದು ಸಂಬಂಧಪಟ್ಟ ಮತಗಟ್ಟೆಗೆ ಭೇಟಿ ನೀಡಿ ವಿಶೇಷ ಅಭಿಯಾನದಲ್ಲಿ ಭಾಗವಹಿಸುವಂತೆ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸೆ. 19-20 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನ : ಮತದಾರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರ ಸೇವೆಗೆ ಅವಕಾಶ Rating: 5 Reviewed By: karavali Times
Scroll to Top