ಮಂಗಳೂರು : ಅನಧಿಕೃತ ಬೀದಿ ಬದಿ ವ್ಯಾಪಾರ ತೆರವುಗೊಳಿಸಲು ಮಹಾನಗರ ಪಾಲಿಕೆ ಸೂಚನೆ - Karavali Times ಮಂಗಳೂರು : ಅನಧಿಕೃತ ಬೀದಿ ಬದಿ ವ್ಯಾಪಾರ ತೆರವುಗೊಳಿಸಲು ಮಹಾನಗರ ಪಾಲಿಕೆ ಸೂಚನೆ - Karavali Times

728x90

2 September 2026

ಮಂಗಳೂರು : ಅನಧಿಕೃತ ಬೀದಿ ಬದಿ ವ್ಯಾಪಾರ ತೆರವುಗೊಳಿಸಲು ಮಹಾನಗರ ಪಾಲಿಕೆ ಸೂಚನೆ

ಮಂಗಳೂರು, ಸೆಪ್ಟೆಂಬರ್ 01, 2026 ( ಕರಾವಳಿ ಟೈಮ್ಸ್) : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದ್ದು, ಪಾದಚಾರಿ ರಸ್ತೆಗಳಲ್ಲಿ ಮತ್ತು ಇನ್ನಿತರೆ ಪ್ರದೇಶದಲ್ಲಿ ಅನಧಿಕೃತವಾಗಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಹಿತರಕ್ಷಣೆಗೆ ಹಾಗೂ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮತ್ತು ವಿವಿಧ ಸಂಘಟನೆಗಳಿಂದ ದೂರುಗಳು ಬರುತ್ತಿದೆ.

ಮಂಗಳೂರು ಮಹಾನಗರಪಾಲಿಕೆಯಿಂದ ಈಗಾಗಲೇ ಬೀದಿ ಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣ ಪತ್ರ ಪಡೆದುಕೊಂಡಿರುವ ಬೀದಿ ಬದಿ ವ್ಯಾಪಾರಿಗಳನ್ನು ಹೊರತು ಪಡಿಸಿ ಇತರರು ಅನಧಿಕೃತವಾಗಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದಲ್ಲಿ ವ್ಯಾಪಾರವನ್ನು ಸ್ವಯಂ ಆಗಿ ತೆರವುಗೊಳಿಸಲು ಸೂಚಿಸಲಾಗಿದೆ. ಅನಧಿಕೃತ ಬೀದಿ ಬದಿ ವ್ಯಾಪಾರವನ್ನು ತೆರವುಗೊಳಿಸದೇ ಇದ್ದಲ್ಲಿ ಬೀದಿ ಬದಿ ವ್ಯಾಪಾರಿಗಳ ಕಾಯ್ದೆ ಪ್ರಕಾರವಾಗಿ ಅನಧಿಕೃತ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಮಹಾನಗರಪಾಲಿಕೆ ವಲಯ ಆಯುಕ್ತರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು : ಅನಧಿಕೃತ ಬೀದಿ ಬದಿ ವ್ಯಾಪಾರ ತೆರವುಗೊಳಿಸಲು ಮಹಾನಗರ ಪಾಲಿಕೆ ಸೂಚನೆ Rating: 5 Reviewed By: karavali Times
Scroll to Top