ಬಂಟ್ವಾಳ, ಸೆಪ್ಟೆಂಬರ್ 25, 2026 (ಕರಾವಳಿ ಟೈಮ್ಸ್) : ತೆಂಕಬೆಳ್ಳೂರು ಗ್ರಾಮದ ನಿವಾಸಿ ಪ್ರಶಾಂತ್ ಬೆಳ್ಚಡ (41) ಅವರ ಮೇಲೆ ಸೆ 20 ರಂದು ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳಾದ ಅಮ್ಮುಂಜೆ ನಿವಾಸಿಗಳಾದ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ (43) ಹಾಗೂ ಬಡಬೆಳ್ಳೂರು ನಿವಾಸಿ ಶಂಕರ (45) ಅವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಸೆ 25 ರಂದು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನನ್ನು ಹೆಚ್ಚಿನ ವಿಚಾರಣೆಗಾಗಿ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪ್ರಶಾಂತ್ ಬೆಳ್ಚಡ ಅವರು ಸೆ 20 ರಂದು ಸಂಜೆ ವೇಳೆ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿದ್ದಾಗ ಅಟೋ ರಿಕ್ಷಾದಲ್ಲಿ ಬಂದ ಆರೋಪಿಗಳು ತಲವಾರು ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದರು. ಹಲ್ಲೆ ಕಾರಣದಿಂದ ಪ್ರಶಾಂತ್ ಅವರಿಗೆ ಗಂಭೀರ ಗಾಯಗಳಾಗಿತ್ತು. ಈ ಬಗ್ಗೆ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.
















0 comments:
Post a Comment