ಸೆ 5 ರಂದು ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಮಂಗಳೂರು ಪೊಲೀಸರಿಂದ ಸಂಚಾರಿ ಸೂಚನೆಗಳು - Karavali Times ಸೆ 5 ರಂದು ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಮಂಗಳೂರು ಪೊಲೀಸರಿಂದ ಸಂಚಾರಿ ಸೂಚನೆಗಳು - Karavali Times

728x90

4 September 2026

ಸೆ 5 ರಂದು ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಮಂಗಳೂರು ಪೊಲೀಸರಿಂದ ಸಂಚಾರಿ ಸೂಚನೆಗಳು

ಮಂಗಳೂರು, ಸೆಪ್ಟೆಂಬರ್ 04, 2026 (ಕರಾವಳಿ ಟೈಮ್ಸ್) : ಸೆಪ್ಟೆಂಬರ್ 5 ರಂದು ಮಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ನಗರದ ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹಾಗೂ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡದಂತೆ ಸೂಚಿಸಲಾಗಿದೆ.

ವಾಹನ ಸಂಚಾರ ದಟ್ಟಣೆಯಾಗುವ ಸ್ಥಳಗಳು ಹಾಗೂ ಪರ್ಯಾಯ ಮಾರ್ಗಗಳ ವಿವರ :

ತೊಕ್ಕೊಟ್ಟು ಒಳಪೇಟೆ ಮೊಸರುಕುಡಿಕೆ : ರಾಷ್ಟ್ರೀಯ ಹೆದ್ದಾರಿ-66ರಲ್ಲಿ ತೊಕ್ಕೊಟ್ಟು ಜಂಕ್ಷನ್ನಿನಿಂದ ಕೊಲ್ಯ ಜಂಕ್ಷನ್ ವರೆಗೆ ಹಾಗೂ ಉಳ್ಳಾಲ ಅಬ್ಬಕ್ಕ ವೃತ್ತ/ ಒಳಪೇಟೆ ಕಡೆಗೆ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ.

ಪರ್ಯಾಯ ಮಾರ್ಗ :

ತೊಕ್ಕೊಟ್ಟು ಜಂಕ್ಷನ್ ಮೂಲಕ ತಲಪಾಡಿ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸರ್ವಿಸ್ ರಸ್ತೆಗೆ ಎಡಕ್ಕೆ ತಿರುಗಿ, ದೇರಳಕಟ್ಟೆ ಜಂಕ್ಷನ್ನಿನಲ್ಲಿ ಬಲಕ್ಕೆ ತಿರುಗಿ, ಮಡ್ಯಾರ್-ಮಾಡೂರು-ಬೀರಿ ಕೋಟೆಕಾರ್ ಜಂಕ್ಷನ್ ಮೂಲಕ ಸಂಚರಿಸಬಹುದಾಗಿದೆ. 

ತೊಕ್ಕೊಟ್ಟು ಜಂಕ್ಷನ್ನಿನಿಂದ ಉಳ್ಳಾಲ ಅಬ್ಬಕ್ಕ ವೃತ್ತ ಹಾಗೂ ತೊಕ್ಕೊಟ್ಟು ಒಳಪೇಟೆ ಕಡೆಗೆ ಸಂಚರಿಸುವ ವಾಹನಗಳು ಬೀರಿ ಕೋಟೆಕಾರ್-ಸೋಮೇಶ್ವರ ಮಾರ್ಗವಾಗಿ ಸಂಚರಿಸಬಹುದಾಗಿದೆ. 

ಕದ್ರಿ ಶ್ರೀ ಗೋಪಾಲಕೃಷ್ಣ ಮಠ, ಕದ್ರಿ ಕಂಬಳ ಮೊಸರು ಕುಡಿಕೆ :

ಬಟ್ಟಗುಡ್ಡೆ ಜಂಕ್ಷನ್ನಿನಿಂದ ಕದ್ರಿ ಕಂಬಳ-ಭಾರತ್ ಬೀಡಿವರೆಗೆ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ.

ಪರ್ಯಾಯ ಮಾರ್ಗ :

ಬಟ್ಟಗುಡ್ಡೆ ಕಡೆಯಿಂದ ಕದ್ರಿ ಕಂಬಳ ಕಡೆಗೆ ಸಂಚರಿಸುವ ವಾಹನಗಳು ಬಿಜೈ ಜಂಕ್ಷನ್-ಪಿಂಟೋ ಬೇಕರಿ-ಕರಂಗಲಪಾಡಿ ಮಾರ್ಗವಾಗಿ ಸಂಚರಿಸಬಹುದಾಗಿದೆ. 

ಭಾರತ್ ಬೀಡಿ ಕಡೆಯಿಂದ ಬಟ್ಟಗುಡ್ಡೆ ಕಡೆಗೆ ಸಂಚರಿಸುವ ವಾಹನಗಳು ಮಲ್ಲಿಕಟ್ಟೆ-ನಂತೂರು ಮಾರ್ಗವಾಗಿ ಸಂಚರಿಸಬಹುದಾಗಿದೆ. 

ಶ್ರೀ ಅರಸು ಮುಂಡತ್ತಾಯ ಮೈದಾನ, ಅತ್ತಾವರ ಮೊಸರು ಕುಡಿಕೆ : 

ಕೋಟಿ ಚೆನ್ನಯ ವೃತ್ತದಿಂದ ಬಾಬುಗುಡ್ಡೆ-ಅತ್ತಾವರ ಕೆ.ಎಂ.ಸಿ. ರಸ್ತೆ-ಆನಂದ ಶೆಟ್ಟಿ ವೃತ್ತದವರೆಗೆ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ.

ಪರ್ಯಾಯ ಮಾರ್ಗ :

ಕೋಟಿ ಚೆನ್ನಯ ವೃತ್ತದ ಕಡೆಯಿಂದ ಅತ್ತಾವರ ಕಡೆಗೆ ಸಂಚರಿಸುವ ವಾಹನಗಳು ವೆಲೆನ್ಸಿಯಾ ಮಾರ್ಗವಾಗಿ ಸಂಚರಿಸಬಹುದಾಗಿದೆ. 

ಅತ್ತಾವರ ಕಡೆಯಿಂದ ಕೋಟಿ ಚೆನ್ನಯ ವೃತ್ತದ ಕಡೆಗೆ ಸಂಚರಿಸುವ ವಾಹನಗಳು ಅತ್ತಾವರ ಆನಂದ ಶೆಟ್ಟಿ ವೃತ್ತದಲ್ಲಿ ಎಡಕ್ಕೆ ತಿರುಗಿ, ಎಸ್.ಎಲ್. ಮಥಾಯಸ್ ರಸ್ತೆ-ಹೈಲ್ಯಾಂಡ್ ಜಂಕ್ಷನ್ ಮೂಲಕ ಸಂಚರಿಸಬಹುದಾಗಿದೆ. 

ಶ್ರೀ ಕೃಷ್ಣ ಜ್ಞಾನೋದಯ ಭಜನಾ ಮಂದಿರ, ಕೊಟ್ಟಾರ ಮೊಸರು ಕುಡಿಕೆ :

ಕೊಟ್ಟಾರ ಚೌಕಿಯಿಂದ ಉರ್ವಸ್ಟೋರ್ ಜಂಕ್ಷನ್ ವರೆಗೆ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದೆ.

ಪರ್ಯಾಯ ಮಾರ್ಗ : 

ಲಾಲ್ ಬಾಗ್/ ನಾರಾಯಣಗುರು ವೃತ್ತದಿಂದ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳು ಕೆ.ಎಸ್.ಆರ್.ಟಿ.ಸಿ.-ಕುಂಟಿಕಾನ ಮಾರ್ಗವಾಗಿ ಸಂಚರಿಸಬಹುದಾಗಿದೆ. 

ಕೊಟ್ಟಾರ ಚೌಕಿ ಕಡೆಯಿಂದ ಲಾಲ್ ಬಾಗ್  ಕಡೆಗೆ ಸಂಚರಿಸುವ ಲಘು ವಾಹನಗಳು ಕುಂಟಿಕಾನ-ಬಿಜೈ-ಕೆ.ಎಸ್.ಆರ್.ಟಿ.ಸಿ. ಮಾರ್ಗವಾಗಿ ಸಂಚರಿಸಬಹುದಾಗಿದೆ. 

ಕೊಟ್ಟಾರ ಚೌಕಿ ಕಡೆಯಿಂದ ಲಾಲ್ ಬಾಗ್ ಕಡೆಗೆ ಸಂಚರಿಸುವ ಘನ ವಾಹನಗಳು ಕುಂಟಿಕಾನ-ಕೆ.ಪಿ.ಟಿ. ವೃತ್ತ ಮಾರ್ಗವಾಗಿ ಸಂಚರಿಸಬಹುದಾಗಿದೆ. 

ಸೆ 5 ರಂದು ಮಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳು ನಡೆಯಲಿರುವುದರಿಂದ, ನಗರದ ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಪರ್ಯಾಯ ಮಾರ್ಗಗಳನ್ನು ಬಳಸುವಂತೆ, ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಹಾಗೂ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡದಂತೆ ಮತ್ತು ಸಂಚಾರ ನಿಯಂತ್ರಣದ ಸಂದರ್ಭದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮನವಿ ಮನವಿ ಮಾಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸೆ 5 ರಂದು ಮೊಸರು ಕುಡಿಕೆ ಉತ್ಸವ ಪ್ರಯುಕ್ತ ಮಂಗಳೂರು ಪೊಲೀಸರಿಂದ ಸಂಚಾರಿ ಸೂಚನೆಗಳು Rating: 5 Reviewed By: karavali Times
Scroll to Top