ಕ್ಯಾಬಿನೆಟ್ ಸಭೆಯ ನಿರ್ಣಯಗಳ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಿಸುವಂತೆ ಸಚಿವ ಖಾದರ್ ಸೂಚನೆ - Karavali Times ಕ್ಯಾಬಿನೆಟ್ ಸಭೆಯ ನಿರ್ಣಯಗಳ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಿಸುವಂತೆ ಸಚಿವ ಖಾದರ್ ಸೂಚನೆ - Karavali Times

728x90

29 September 2026

ಕ್ಯಾಬಿನೆಟ್ ಸಭೆಯ ನಿರ್ಣಯಗಳ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಿಸುವಂತೆ ಸಚಿವ ಖಾದರ್ ಸೂಚನೆ

ಮಂಗಳೂರು, ಸೆಪ್ಟೆಂಬರ್ 29, 2026 (ಕರಾವಳಿ ಟೈಮ್ಸ್) : ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ತ್ವರಿತವಾಗಿ ಅನುಷ್ಠಾನಕ್ಕೆ ತರಲು ಸಂಬಂಧಿಸಿದ ಇಲಾಖೆಗಳು ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೆ 28 ರಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯ ನಿರ್ಧಾರಗಳು ಸರಕಾರದ ಆದೇಶವಾಗಿ ಬರಲು ಸಂಬಂಧಿಸಿದ ಇಲಾಖೆಗಳು ಸಚಿವಾಲಯದೊಂದಿಗೆ ನಿರಂತರ ಸಮನ್ವಯದಲ್ಲಿರಬೇಕು. ಈ ಸಂಬಂಧ ತ್ವರಿತವಾಗಿ ಮಾಹಿತಿಯನ್ನು ನೀಡಬೇಕು ಎಂದು ಸೂಚಿಸಿದರು. 

ಸರಕಾರ ಆದೇಶ ಹೊರಡಿಸಿದ ಕೂಡಲೇ ಕ್ರಿಯಾ ಯೋಜನೆ ತಯಾರಿಸಿ ಟೆಂಡರ್ ಪ್ರಕ್ರಿಯೆ ಕೈಗೊಳ್ಳಬೇಕು.  ಅಧಿಕಾರಿಗಳು ಯೋಜನೆಗಳ ಬಗ್ಗೆ ಸ್ಪಷ್ಟ ಮಾಹಿತಿ ಹೊಂದಿರಬೇಕು. ಶೀಘ್ರದಲ್ಲೇ ಮುಖ್ಯಮಂತ್ರಿಗಳು ಇದರ ಪರಿಶೀಲನೆ ನಡೆಸಲು  ಆಗಮಿಸಲಿದ್ದಾರೆ ಎಂದು ಸಚಿವರು ತಿಳಿಸಿದರು. 

ಕುದ್ರು ದ್ವೀಪಗಳ ಅಭಿವೃದ್ಧಿ ಪಿಪಿಪಿ ಮಾಡೆಲ್‍ನಲ್ಲಿ ನಡೆಯಲಿದ್ದು, ಈ ಬಗ್ಗೆ ಯೋಜನಾ ಅನುಷ್ಠಾನಕ್ಕೆ ಟೆಂಡರ್ ಪ್ರಕ್ರಿಯೆ ನಡೆಸಬೇಕು. ಸಿ.ಆರ್.ಜೆಡ್ ಅನುಮೋದನೆ ಪಡೆಯಲು ಕ್ರಮ ಕೈಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದರು. 

ಏರ್ ಪೋರ್ಟ್ ರಸ್ತೆ ಮರವೂರು ಹೊಸ ಸೇತುವೆ, ಎಕ್ಕೂರಿನಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ ಸೇರಿದಂತೆ ಮೂಲ ಸೌಕರ್ಯಗಳ ಯೋಜನೆಗಳ ಡಿಪಿಆರ್ ತಯಾರಿಸಲು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.

ಬಾಳೆಪುಣಿಯಲ್ಲಿ ನಿರ್ಮಾಣವಾಗುತ್ತಿರುವ ಜೈಲಿನ ಕಾಂಪೌಂಡ್ ಕಾಮಗಾರಿಯನ್ನು ತ್ವರಿತವಾಗಿ ನಿರ್ವಹಿಸಬೇಕು.  ಮಂಗಳ ಕ್ರೀಡಾಂಗಣದಲ್ಲಿ ಸ್ಟೇಡಿಯಂ ಸಂಪೂರ್ಣವಾಗಿ ಅತ್ಯಾಧುನಿಕವಾಗಿ ಅಭಿವೃದ್ಧಿಗೊಳಿಸಬೇಕು. ಇದಕ್ಕಾಗಿ ಸ್ಟೇಡಿಯಂ ಕಾಮಗಾರಿ ನಿರ್ವಹಿಸಿರುವ ಅನುಭವಿಗಳನ್ನು ಸಂಪರ್ಕಿಸುವಂತೆ ಸಚಿವರು ತಿಳಿಸಿದರು. ಉಳ್ಳಾಲ ಕೋಟೆಪುರ ಹೊಸ ಸೇತುವೆ ನಿರ್ಮಾಣ ಹಾಗೂ ಹೊಸ ಜೆಟ್ಟಿ ನಿರ್ಮಾಣ ಕಾಮಗಾರಿಯನ್ನು ಸಮನ್ವಯದಿಂದ ನಿರ್ವಹಿಸಬೇಕು ಎಂದವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ ಎಚ್.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ನಗರ ಪೆÇಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ,  ಮಹಾನಗರಪಾಲಿಕೆ ಕಮಿಷನರ್ ರಾಹುಲ್ ರತ್ನಂ ಪಾಂಡೆ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಕ್ಯಾಬಿನೆಟ್ ಸಭೆಯ ನಿರ್ಣಯಗಳ ಅನುಷ್ಠಾನಕ್ಕೆ ನೋಡಲ್ ಅಧಿಕಾರಿಗಳ ನೇಮಿಸುವಂತೆ ಸಚಿವ ಖಾದರ್ ಸೂಚನೆ Rating: 5 Reviewed By: karavali Times
Scroll to Top