ಬಂಟ್ವಾಳ, ಸೆಪ್ಟೆಂಬರ್ 16, 2026 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣಾ ಪ್ರಕರಣದಲ್ಲಿ ಅರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಸೆ 15 ರಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ ಅಲಿಯಾಸ್ ಸಫಾರಿ ನೌಫಲ್ (34) ಎಂದು ಹೆಸರಿಸಲಾಗಿದೆ.
ಈತ ಸೆ 15 ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೆÇಲೀಸರು ದಸ್ತಗಿರಿ ಮಾಡಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆ 29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
















0 comments:
Post a Comment