ಬಡಗಬೆಳ್ಳೂರು : ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ - Karavali Times ಬಡಗಬೆಳ್ಳೂರು : ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ - Karavali Times

728x90

29 September 2026

ಬಡಗಬೆಳ್ಳೂರು : ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ

ಬಂಟ್ವಾಳ, ಸೆಪ್ಟೆಂಬರ್ 29, 2026 (ಕರಾವಳಿ ಟೈಮ್ಸ್) : ಬಡಗಬೆಳ್ಳೂರು ಗ್ರಾಮದ ಪಲ್ಲಿಪ್ಪಾಡಿ ಬಳಿ ರಾಟೆ ಎಂಬಲ್ಲಿ ಕೆರೆಯ ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ ಘಟನೆ ಸೆ 28 ರಂದು ನಡೆದಿದೆ. 

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಸೈ ಮಂಜುನಾಥ ಟಿ ಅವರ ನೇತೃತ್ವದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಈ ದಾಳಿ ಸಂಘಟಿಸಿದ್ದಾರೆ. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ ಆರೋಪಿಗಳಾದ ಬಡಗಬೆಳ್ಳೂರು ನಿವಾಸಿಗಳಾದ ಇರ್ಪಾನ್ (40) ಹಾಗೂ ನೌಶಾದ್ (31) ಅರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿದ್ದ ಸುಮಾರು 6 ಸಾವಿರ ರೂಪಾಯಿ ಮೌಲ್ಯದ ಎರಡು ಪಿಕಪ್ ನಷ್ಟಿದ್ದ ಮರಳು ಸಹಿತ ಇತರ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಬಡಗಬೆಳ್ಳೂರು : ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ Rating: 5 Reviewed By: karavali Times
Scroll to Top