ಬೋಳಂತೂರು : ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ವಿಟ್ಲ ಪೊಲೀಸರು - Karavali Times ಬೋಳಂತೂರು : ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ವಿಟ್ಲ ಪೊಲೀಸರು - Karavali Times

728x90

9 September 2026

ಬೋಳಂತೂರು : ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ವಿಟ್ಲ ಪೊಲೀಸರು

ಬಂಟ್ವಾಳ, ಸೆಪ್ಟೆಂಬರ್ 09, 2026 (ಕರಾವಳಿ ಟೈಮ್ಸ್) : ತಾಲೂಕಿನ ಬೋಳಂತೂರು ಎಂಬಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಪತ್ತೆ ಹಚ್ಚಿದ ವಿಟ್ಲ ಪೊಲೀಸರು ಲಾರಿ, ಕಲ್ಲು ಸಹಿತ ಆರೋಪಿ ಚಾಲಕನನ್ನು ವಶಕ್ಕೆ ಪಡೆದುಕೊಂಡ ಘಟನೆ ಸೆ 8 ರಂದು ಸಂಜೆ ನಡೆದಿದೆ. 

ವಿಟ್ಲ ಪೊಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ಅವರ ನೇತೃತ್ವದ ಪೊಲೀಸರು ಬೋಳಂತೂರಿನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೋಳಂತೂರು ನಿವಾಸಿ ಅಶ್ರಫ್ ಎಂಬಾತ ಚಾಲಕನಾಗಿದ್ದ ಲಾರಿಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ 250 ಕೆಂಪು ಕಲ್ಲುಗಳಿದ್ದು, ಲಾರಿ ಸಹಿತ ಅದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಬೋಳಂತೂರು : ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ವಿಟ್ಲ ಪೊಲೀಸರು Rating: 5 Reviewed By: karavali Times
Scroll to Top