2024ರ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿ ನ್ಯಾಯಾಲಯ ತೀರ್ಪು - Karavali Times 2024ರ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿ ನ್ಯಾಯಾಲಯ ತೀರ್ಪು - Karavali Times

728x90

12 October 2026

2024ರ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿ ನ್ಯಾಯಾಲಯ ತೀರ್ಪು

ಮಂಗಳೂರು, ಅಕ್ಟೋಬರ್ 12, 2026 (ಕರಾವಳಿ ಟೈಮ್ಸ್) : ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟ ಬೆಂಗ್ರೆ ಎಂಬಲ್ಲಿ 2024 ರಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. 

ಶಿಕ್ಷೆಗೊಳಗಾದ ಅಪರಾಧಿಯನ್ನು ತೋಟ ಬೆಂಗ್ರೆ ನಿವಾಸಿ ಭಾಸ್ಕರ್ ಮೆಂಡನ್ ಎಂಬವರ ಪುತ್ರ ಧರ್ಮರಾಜ್ ಸುವರ್ಣ (50) ಎಂದು ಹೆಸರಿಸಲಾಗಿದೆ. 2024 ರ ಸೆಪ್ಟೆಂಬರ್ 21 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ  ಪಣಂಬೂರು ಪೆÇಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಬದಿಯ ಸಮುದ್ರ ಕಿನಾರೆಯ  ಬಳಿ  ಭಾಗಲಕೋಟೆ ಮೂಲದ 39 ವರ್ಷದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ  ಎಂಬವರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಕರಣದ ಪಿರ್ಯಾದುದಾರರಾದ ಹನುಮಂತ ದುರ್ಗಪ್ಪ ವಡ್ಡರ್  ಎಂಬವರು ನೀಡಿದ ದೂರಿನಂತೆ ಪಣಂಬೂರು ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 99/2024 ಕಲಂ 103 (1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು. 

ಪ್ರಕರಣದಲ್ಲಿ ಆರೋಪಿ ಧರ್ಮರಾಜ್ ಸುವರ್ಣ ಎಂಬಾತನನ್ನು ಸೆ 26 ರಂದು ಬೆಳಗಿನ ಜಾವ 3 ಗಂಟೆಗೆ ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಚೊಂಪಾಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. 

ಆರೋಪಿ ಧರ್ಮರಾಜ್ ಸುವರ್ಣ ಮತ್ತು  ಮೃತ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಕಳೆದ ಕೆಲವು ಸಮಯದಿಂದ ಒಬ್ಬರಿಗೊಬ್ಬರು ಪರಿಚಯದವರಾಗಿದ್ದು, ಇತ್ತೀಚೆಗೆ ಆರೋಪಿಯ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿಸಿದ್ದರು. ಆ ಮೊಬೈಲನ್ನು ಮೃತ ಮುತ್ತು ಬಸವಾರಾಜ್ ತೆಗೆದುಕೊಂಡು ವಾಪಾಸ್ ನೀಡದೆ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿ ಆರೋಪಿಯು ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪನನ್ನು ಮರದ ಸೋಂಟೆಯಿಂದ ಹೊಡೆದು ಕೊಲೆ ಮಾಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ಕಲಂ 103(1) ಬಿ ಎನ್ ಎಸ್  ಮತ್ತು ಕಲಂ 3(2)(5) ರಂತೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. 

2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸ್ಪೆಶಲ್ ಕೇಸ್ ನಂಬ್ರ 207/2024 ರಂತೆ  ವಿಚಾರಣೆ ನಡೆದು, ಪ್ರಕರಣದಲ್ಲಿ  ಆರೋಪಿ ಧರ್ಮರಾಜ್ ಸುವರ್ಣ ಎಂಬಾತನಿಗೆ ನ್ಯಾಯಾಧೀಶ ಜಗದೀಶ್ ಅವರು ಅ 12 ರಂದು ಕಲಂ 103(1) ಬಿ ಎನ್ ಎಸ್  ಕಾಯ್ದೆಯಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು 15 ಸಾವಿರ ರೂಪಾಯಿ ದಂಡ ಹಾಗೂ ದಂಡ ಪಾವತಿಸಲು ವಿಫಲನಾದರೆ 6 ತಿಂಗಳ ಅವಧಿಗೆ ಸಾದಾ ಜೈಲು ಶಿಕ್ಷೆ ವಿಧಿಸಿರುತ್ತಾರೆ. 

ಪ್ರಕರಣದ ತನಿಖೆಯನ್ನು ಪಣಂಬೂರು ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ಅವರು ಭಾಗಶಃ ನಡೆಸಿ, ನಂತರ ತನಿಖೆಯಲ್ಲಿ ಎಸ್ಸಿ-ಎಸ್ಟಿ ಕಾಯ್ದೆ ಕಲಂಗಳು ಸೇರ್ಪಡೆಗೊಂಡಿರುವುದರಿಂದ ಮುಂದಿನ ತನಿಖೆಯ ಬಗ್ಗೆ ಕಡತವನ್ನು ಮಂಗಳೂರು-ಪಣಂಬೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀಕಾಂತ ಕೆ ಅವರಿಗೆ ನೀಡಿದ್ದು,  ಮುಂದಿನ ತನಿಖೆ ನಡೆಸಿದ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ ಅವರು ವಾದ ಮಂಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: 2024ರ ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿ ನ್ಯಾಯಾಲಯ ತೀರ್ಪು Rating: 5 Reviewed By: karavali Times
Scroll to Top