ಮಂಗಳೂರು, ಅಕ್ಟೋಬರ್ 06, 2026 (ಕರಾವಳಿ ಟೈಮ್ಸ್) : ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ನಿರಂತರ ಜನಸೇವೆಯ ಪ್ರಯುಕ್ತ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಗೌರವ ಸಮರ್ಪಣೆಯ ಅಂಗಳದ ಉತ್ಸವ ಕಾರ್ಯಕ್ರಮವು ನಡೆಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಪ್ರಧಾನಿಗಳು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಸಮರ್ಪಿಸಿದ್ದಾರೆ. ಅವರ ಬದುಕು ನಮ್ಮಂತಹ ಪ್ರತಿಯೊಬ್ಬ ಕಾರ್ಯಕರ್ತರಿಗೂ ಆದರ್ಶ. ಮೋದಿಜೀ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಸೇವಾ ಕಾರ್ಯಗಳು ಅವರಿಗೆ ಜನಸೇವೆಗೆ ಇನ್ನಷ್ಟು ಹೆಚ್ಚಿನ ಶಕ್ತಿ ನೀಡಲಿ ಎಂದರು.
ಈ ಸಂದರ್ಭ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂರ್ಣಿಮಾ ರಾವ್, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ದಕ್ಷಿಣ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರವೀಣ್ ನಿಡ್ಡೆಲ್, ಮಂಡಲದ ಉಪಾಧ್ಯಕ್ಷ ಕಿರಣ್ ರೈ, ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಸುಕೇಶ್, ಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ್ ಆಚಾರ್, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಶಬರಿ ಶೆಟ್ಟಿ, ಮಾನಸ ರೈ, ಮಂಡಲ ಕಾರ್ಯದರ್ಶಿ ಸುಮತಿ ಚಂದ್ರಶೇಖರ್ ಮತ್ತು ಕ್ಲಬ್ ಅಧ್ಯಕ್ಷ ಜಿತೇಶ್ ಹಾಗೂ ವಾರ್ಡ್ ಪ್ರಮುಖರು ಉಪಸ್ಥಿತರಿದ್ದರು













0 comments:
Post a Comment