ಬಿಜೈ-ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬಟ್ಟೆ ಬ್ಯಾಗ್, ಆಟಿಕೆ ಸಾಮಾಗ್ರಿ ವಿತರಣೆ - Karavali Times ಬಿಜೈ-ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬಟ್ಟೆ ಬ್ಯಾಗ್, ಆಟಿಕೆ ಸಾಮಾಗ್ರಿ ವಿತರಣೆ - Karavali Times

728x90

4 October 2026

ಬಿಜೈ-ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬಟ್ಟೆ ಬ್ಯಾಗ್, ಆಟಿಕೆ ಸಾಮಾಗ್ರಿ ವಿತರಣೆ

ಮಂಗಳೂರು, ಅಕ್ಟೋಬರ್ 04, 2026 (ಕರಾವಳಿ ಟೈಮ್ಸ್) : ಮಂಗಳೂರು, ಲೋಬೊ ಫೌಂಡೇಶನ್ ಮುಂಬಯಿ ಹಾಗೂ ಗ್ಲೋಬಲ್ ಸಿಂಪಥಿ ಫೌಂಡೇಶನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಬಿಜೈ ಕಾಪಿಕಾಡ್ ಅಂಗನವಾಡಿ ಶಾಲೆಯ ಮಕ್ಕಳಿಗೆ ಬಟ್ಟೆ ಬ್ಯಾಗ್, ಆಟಿಕೆಗಳು ಹಾಗೂ ಸಿಹಿ ತಿಂಡಿ ವಿತರಿಲಾಯಿತು. 

ಇದೇ ವೇಳೆ ಶಾಲಾ ಮಕ್ಕಳ ಶೈಕ್ಷಣಿಕ ಕಲಿಕೆಗೆ ಅಗತ್ಯವಿರುವ ಇಂಟರ್ ನೆಟ್ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ರೋನ್ಸ್ ಬಂಟ್ವಾಳ್ ತಿಳಿಸಿದರು.

ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ ನೀಡಲಾಗುವುದು ಹಾಗೂ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಸಮವಸ್ತ್ರ ಒದಗಿಸುವುದಾಗಿ ಅಂತಾರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ರಾಜ್ಯ ಜೂಡೋ ಅಸೋಸಿಯೇಷನ್ ಅಧ್ಯಕ್ಷ ಯತೀಶ್ ಎನ್. ಬಂಗೇರಾ ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾ ಶಿಕ್ಷಕಿಯರಾದ ನಂದಾ, ಲಕ್ಷ್ಮೀ ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಬಿಜೈ-ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬಟ್ಟೆ ಬ್ಯಾಗ್, ಆಟಿಕೆ ಸಾಮಾಗ್ರಿ ವಿತರಣೆ Rating: 5 Reviewed By: karavali Times
Scroll to Top