ನವರಾತ್ರಿ ಪ್ರಯುಕ್ತ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ - Karavali Times ನವರಾತ್ರಿ ಪ್ರಯುಕ್ತ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ - Karavali Times

728x90

17 October 2026

ನವರಾತ್ರಿ ಪ್ರಯುಕ್ತ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

ಬಂಟ್ವಾಳ, ಅಕ್ಟೋಬರ್ 17, 2026 (ಕರಾವಳಿ ಟೈಮ್ಸ್) : ನವರಾತ್ರಿ ಉತ್ಸವ ಅಂಗವಾಗಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಅ 17 ರಂದು ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. 

ಅರ್ಚಕ ರಾಘವೇಂದ್ರ ಮಯ್ಯರಬೈಲ್ ಹಾಗೂ ಸಹಾಯಕ ಅರ್ಚಕರು ಪೂಜಾ ವಿಧಿ ವಿಧಾನ ಕಾರ್ಯಕ್ರಮ ನೆರವೇರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ನವರಾತ್ರಿಯ ಈ ಸಂದರ್ಭದಲ್ಲಿ ದುರ್ಗಾ ಮಾತೆ ಎಲ್ಲರಿಗೂ ಆರೋಗ್ಯ ಸಂಪತ್ತು, ನೆಮ್ಮದಿ ನೀಡಲಿ ಎಂದು ಹಾರೈಸಿದರು.

ಈ ಸಂದರ್ಭ ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ನವರಾತ್ರಿ ಪ್ರಯುಕ್ತ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಆಯುಧ ಪೂಜಾ ಕಾರ್ಯಕ್ರಮ Rating: 5 Reviewed By: karavali Times
Scroll to Top