ಬಂಟ್ವಾಳ, ಅಕ್ಟೋಬರ್ 11, 2026 (ಕರಾವಳಿ ಟೈಮ್ಸ್) : ಬಿಜೆಪಿ ಯುವಮೋರ್ಚಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ವಿವಿಧ ಸೇವಾ ಕಾರ್ಯಕ್ರಮಗಳು ಬಿ ಸಿ ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ಅ 11 ರಂದು ನಡೆಯಿತು.
ಬೆಳಗ್ಗೆ ಫಿಟ್ ಇಂಡಿಯಾ 5 ಕಿ ಮೀ ಮ್ಯಾರಥಾನ್ ಓಟದ ಸ್ಪರ್ಧೆ ನಡೆಯಿತು. ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಪುಷ್ಪರಾಜ್ ಚೌಟ, ಬಂಟ್ವಾಳ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸುಪ್ರೀತ್ ಆಳ್ವ ಮ್ಯಾರಥಾನ್ ಗೆ ಚಾಲನೆ ನೀಡಿದರು.. ಜಿಲ್ಲಾ ಯುವಮೋರ್ಚ ಅಧ್ಯಕ್ಷ ನಂದನ್ ಮಲ್ಯ, ಉಪಾಧ್ಯಕ್ಷ ಆಶ್ರಿತ್ ನೋಂಡ, ಕಾರ್ಯದರ್ಶಿ ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು. ಓಟ ಬಂಟ್ವಾಳ ಬೈಪಾಸ್ ಜಂಕ್ಷನ್ ವರೆಗೆ ಸಾಗಿ ವಾಪಾಸ್ ಬಂದು ಸ್ಪರ್ಶ ಕಲಾ ಮಂದಿರದಲ್ಲಿ ಸಂಪನ್ನಗೊಂಡಿತು. 150ಕ್ಕೂ ಹೆಚ್ಚು ಮಂದಿ ಮ್ಯಾರಥಾನಿನಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನಶಾ ಮುಕ್ತ ಅಭಿಯಾನದ ಪ್ರತಿಜ್ಞೆ ಸ್ವೀಕರಿಸಲಾಯಿತು.
ಇದೇ ವೇಳೆ ಹಮ್ಮಿಕೊಳ್ಳಲಾದ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಅಂಚೆ ಕಚೇರಿ ವಿಮಾ ಸೌಲಭ್ಯ ನೋಂದಾವಣೆ ಶಿಬಿರ, ಯುವ ಸಾಧಕರ ಸನ್ಮಾನ ಕಾರ್ಯಕ್ರಮಗಳು ನಡೆಯಿತು. ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಚಾಲನೆ ನೀಡಿದರು.
ಸಮಾಜ ಸೇವಕ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟಿನ ಅರ್ಜುನ್ ಭಂಡಾರ್ಕರ್, ಝೀ ಕನ್ನಡದ ಸರಿಗಮಪ ವಿಜೇತ ಅಶ್ಮಿತ್ ಜೆ ವಿಟ್ಲ , ವಿಶೇಷ ಪ್ರತಿಭೆ ಕೌಶಿಕ್ ಆಚಾರ್ಯ, ಭರತನಾಟ್ಯ ಕಲಾವಿದೆ ವಿದುಷಿ ಸಹನಾ ಎಂ ಶೆಟ್ಟಿ, ಕ್ರೀಡಾ ಸಾಧಕಿ ಕು. ಖುಷಿ ಸಾಲ್ಯಾನ್ ಕೆಲಿಂಜ, ಯುವ ಕಂಬಳ ಓಟಗಾರ ಕೃತಿಕ್ ಗೌಡ ಪೆಂರ್ಗಾಲು ಅವರನ್ನು ಸನ್ಮಾನಿಸಲಾಯಿತು.
ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗವಹಿಸಿದ್ದರು. ದಿನೇಶ್ ಶೆಟ್ಟು ದಂಬೆದಾರ್ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಅಧ್ಯಕ್ಷ ಆರ್ ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಶಿವ ಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಎ ಗೋವಿಂದ ಪ್ರಭು, ಹರಿಕೃಷ್ಣ ಬಂಟ್ವಾಳ್, ಸಂದೇಶ್ ಶೆಟ್ಟಿ ಅರೆಬೆಟ್ಟು, ವಿಕಾಸ್ ಪುತ್ತೂರು, ಪ್ರೇಮಾನಂದ ಶೆಟ್ಟಿ, ರಾಕೇಶ್ ರೈ ಕಡೆಂಜಿ, ಜಿಲ್ಲಾ ಯುವಮೋರ್ಚ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಪುರುಷೋತ್ತಮ್ ಸಾಲ್ಯಾನ್ ನರಿಕೊಂಬು, ಲಖಿತಾ ಶೆಟ್ಟಿ, ಹರೀಶ್ ಶೆಟ್ಟಿ ಪಡು, ಪ್ರಸಾದ್ ಕುಮಾರ್ ರೈ ಮೊದಲಾದವರಯ ಭಾಗವಗಹಿಸಿದ್ದರು.
ಸುರತ್ಕಲ್-ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸದಾನಂದ ಶೆಟ್ಟಿ ಹಾಗೂ ಸಿಬ್ಬಂದಿಗಳು, ಪುತ್ತೂರು ಅಂಚೆ ವಿಭಾಗದ ಪ್ರಮುಖರು, ಸಿಬ್ಬಂಧಿಗಳು ಉಪಸ್ಥಿತರಿದ್ದರು.
ಬಂಟ್ವಾಳ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕೋಟ್ಯಾನ್ ಕಡೆಶಿವಾಲಯ ಸ್ವಾಗತಿಸಿ, ಹರಿಪ್ರಸಾದ್ ಭಂಡಾರಿಬೆಟ್ಟು ವಂದಿಸಿದರು. ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಸಹಯೋಗದಲ್ಲಿ ಬಂಟ್ವಾಳ ಪುರಸಭಾ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಹಾಗೂ ಸಹಭೋಜನ ಕಾರ್ಯಕ್ರಮ ನಡೆಯಿತು.


















0 comments:
Post a Comment