ಮಂಗಳೂರು, ಅಕ್ಟೋಬರ್ 26, 2026 (ಕರಾವಳಿ ಟೈಮ್ಸ್) : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡಿನ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆ ರಸ್ತೆ ಅಭಿವೃದ್ಧಿ ಕಾಮಗಾರಿಯು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು.
ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಪ್ರಮುಖರಾದ ಚಂದ್ರಶೇಖರ್ ಬಜಾಲ್ ಹಾಗೂ ಸ್ಥಳೀಯರ ಬೇಡಿಕೆಯಂತೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಎಲ್ಲರ ಸಹಕಾರದೊಂದಿಗೆ ಶೀಘ್ರದಲ್ಲಿ ಈ ಕಾರ್ಯ ಪೂರ್ಣಗೊಂಡು ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದರು. ಈ ಸಂದರ್ಭ ಪ್ರಮುಖರಾದ ಕಿರಣ್ ರೈ, ಸುಕೇಶ್ ಅಳಪೆ ಮೊದಲಾದವರು ಉಪಸ್ಥಿತರಿದ್ದರು.











0 comments:
Post a Comment