ಖಾರಿಫ್ ಬರ ಪರಿಸ್ಥಿತಿ ಅಧ್ಯಯನ : ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಆಗಮನ - Karavali Times ಖಾರಿಫ್ ಬರ ಪರಿಸ್ಥಿತಿ ಅಧ್ಯಯನ : ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಆಗಮನ - Karavali Times

728x90

3 October 2026

ಖಾರಿಫ್ ಬರ ಪರಿಸ್ಥಿತಿ ಅಧ್ಯಯನ : ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಆಗಮನ

ಬೆಂಗಳೂರು, ಅಕ್ಟೋಬರ್ 03, 2026 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಉಂಟಾಗಿರುವ ಖಾರಿಫ್ ಬರದ ಪರಿಸ್ಥಿತಿಯನ್ನು ಪ್ರತ್ಯಕ್ಷವಾಗಿ ಪರಿಶೀಲಿಸಲು ಮತ್ತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಮಟ್ಟದ ಅಧಿಕಾರಿಗಳ ತಂಡವು (ಐಎಂಸಿಟಿ) ಅಕ್ಟೋಬರ್ 3 ರಿಂದ ಅಕ್ಟೋಬರ್ 6 ರವರೆಗೆ ನಾಲ್ಕು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಲಿದೆ.  

ಅಧಿಕಾರಿಗಳ ಈ ತಂಡವನ್ನು ಒಟ್ಟು ಮೂರು ವಿಭಾಗಗಳಾಗಿ, ತಂಡ 1, ತಂಡ 2 ಮತ್ತು ತಂಡ 3 ಎಂದು ವಿಂಗಡಿಸಲಾಗಿದ್ದು, ಈ ತಂಡಗಳು ಬರ ಪೀಡಿತ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿಯನ್ನು ಅವಲೋಕಿಸಲಿವೆ.  

ತಂಡ 1 (ಟೀಮ್ 1) : ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಈ ತಂಡದಲ್ಲಿ ಉಪ ನಿರ್ದೇಶಕ ಚೇತ್ ರಾಮ್ ಮೀನಾ (ತಂಡದ ಸಂಯೋಜಕರು), ವಿಶೇಷ ಅಧಿಕಾರಿ (ಐ ಎಸ್ ಡಿ ) ಕರ್ನಲ್ ಅಮರೀಂದರ್ ಸಿಂಗ್ ಮತ್ತು ನಿರ್ದೇಶಕ ಡಾ. ಜೆ. ಹರ್ಷ ಸದಸ್ಯರಾಗಿದ್ದಾರೆ. ಈ ತಂಡವು ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಪರಿಶೀಲನೆ ನಡೆಸಲಿದೆ.  

ತಂಡ 2 (ಟೀಮ್ 2) : ಸಹಾಯಕ ಆಯುಕ್ತರಾದ ಡಾ. ಸುದಮ್ ಬಾಗ್ ಅವರ ನೇತೃತ್ವದ ತಂಡದಲ್ಲಿ ಸಹಾಯಕ ಸಲಹೆಗಾರರಾದ ಆಶಿಶ್ ಪಾಂಡೆ, ಅಧೀನ ಕಾರ್ಯದರ್ಶಿ, ಪ್ರದೀಪ್ ಕುಮಾರ್ ಮತ್ತು ಉಪ ನಿರ್ದೇಶಕ ಕರಣ್ ಚೌಧರಿ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ತಂಡವು ಹಾಸನ, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ.  

ತಂಡ 3 (ಟೀಮ್ 3) : ನಿರ್ದೇಶಕ ಡಾ. ಮನ್ ಸಿಂಗ್ ಅವರ ನೇತೃತ್ವದ ಮೂರನೇ ತಂಡದಲ್ಲಿ ಅಧೀನ ಕಾರ್ಯದರ್ಶಿ ಪಾರ್ಥ ಪಾಲ್ ಹಾಗೂ ಅಧೀನ ಕಾರ್ಯದರ್ಶಿ ರಾಕೇಶ್ ಕುಮಾರ್ ಸದಸ್ಯರಾಗಿದ್ದಾರೆ. ಈ ತಂಡವು ಯಾದಗಿರಿ, ರಾಯಚೂರು, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಖಾರಿಫ್ ಬರದ ತೀವ್ರತೆ ಮತ್ತು ಹಾನಿಯ ಕುರಿತು ಪರಿಶೀಲಿಸಲಿದೆ.

ಈ ಭೇಟಿಯ ನಂತರ ಕೇಂದ್ರ ತಂಡವು ರಾಜ್ಯದ ಬೆಳೆ ಹಾನಿ ಮತ್ತು ರೈತರ ಸಂಕಷ್ಟದ ಕುರಿತು ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಿದೆ.

  • Blogger Comments
  • Facebook Comments

0 comments:

Post a Comment

Item Reviewed: ಖಾರಿಫ್ ಬರ ಪರಿಸ್ಥಿತಿ ಅಧ್ಯಯನ : ರಾಜ್ಯಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಆಗಮನ Rating: 5 Reviewed By: karavali Times
Scroll to Top