ಸುಳ್ಯ, ಅಕ್ಟೋಬರ್ 01, 2026 (ಕರಾವಳಿ ಟೈಮ್ಸ್) : ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕ ಎಂಬಲ್ಲಿನ ಗ್ಯಾರೇಜಿನಲ್ಲಿರಿಸಿದ್ದ ಬೈಕಿಗೆ ಆಗಸ್ಟ್ 26 ರಂದು ರಾತ್ರಿ ಬೆಂಕಿ ಹಾಕಿ ಸುಟ್ಟಿರುವ ಪ್ರಕರಣ ಬೇಧಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನ ರಾಜು (23 ) ಎಂಬವರನ್ನು ದಸ್ತಗಿರಿ ಮಾಡಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.














0 comments:
Post a Comment