ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಕ್ತದಾನ ಶಿಬಿರ - Karavali Times ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಕ್ತದಾನ ಶಿಬಿರ - Karavali Times

728x90

11 October 2026

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಕ್ತದಾನ ಶಿಬಿರ

ಮಂಗಳೂರು, ಅಕ್ಟೋಬರ್ 11, 2026 (ಕರಾವಳಿ ಟೈಮ್ಸ್) : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಯುವ ಮೋರ್ಚಾ ವತಿಯಿಂದ, ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ ಸಹಯೋಗದೊಂದಿಗೆ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ರಡ್ ಕ್ರಾಸ್ ಸೆಂಟಿನರಿ ಬಿಲ್ಡಿಂಗಿನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಈ ವೇಳೆ ಮಾತನಾಡಿದ ಶಾಸಕರು, ನರೇಂದ್ರ ಮೋದಿಯವರು ಈ ರಾಷ್ಟ್ರ ಕಂಡ ಅದ್ವಿತೀಯ ನಾಯಕ. ಸಂಘದ ಪ್ರಚಾರಕರಾಗಿ, ಪಕ್ಷದ ಪ್ರಮುಖರಾಗಿ ನಂತರ ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ 25 ವರ್ಷಗಳನ್ನು ಪೂರೈಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅದರ ಭಾಗವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ನಿತಿನ್ ನಬಿನ್ ಅವರ ಸೂಚನೆಯ ಮೇರೆಗೆ ಎಲ್ಲೆಡೆ ಸೇವಾ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ ಮಂಡಲದ ಮಹಿಳಾ ಮೋರ್ಚಾ ವತಿಯಿಂದಲೂ ಹಲವು ಕಾರ್ಯಕ್ರಮಗಳು ನಡೆದಿವೆ. ರಕ್ತದಾನವು ಅತೀ ಅಮೂಲ್ಯವಾಗಿದ್ದು ನವರಾತ್ರಿ ಹಬ್ಬವನ್ನು ಈ ಮೂಲಕ ಆರಂಭ ಮಾಡಿರುವ ಯುವ ಮೋರ್ಚಾ ತಂಡಕ್ಕೆ ಅಭಿನಂದನೆಗಳು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಂಡಲದ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ದ.ಕ ಚೇರ್ಮನ್ ಶಾಂತಾರಾಮ್ ಶೆಟ್ಟಿ, ಪ್ರಮುಖರಾದ ಮೋನಪ್ಪ ಭಂಡಾರಿ, ಜಯಕುಮಾರ್, ರಾಜ್ ಗೋಪಾಲ್ ರೈ, ಋತ್ವಿಕ್ ಕದ್ರಿ, ಮೌನಿಶ್ ಚೌಟ, ನಿತಿನ್ ಕುಮಾರ್, ವರುಣ್ ಅಂಬಟ್, ಹರೀಶ್ ರೈ, ದಯಾನಂದ ಶೆಟ್ಟಿ, ರಾಘವೇಂದ್ರ ರಾವ್ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ರಕ್ತದಾನ ಶಿಬಿರ Rating: 5 Reviewed By: karavali Times
Scroll to Top