ಉಪ್ಪಿನಂಗಡಿ, ಅಕ್ಟೋಬರ್ 05, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 120/2008, ಕಲಂ: 450,302,201 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್ ಜಯೇಶ್ ಕಾಂತ್ ಎಸ್, ಶಾಹಿರ್ ಅಲಿಯಾಸ್ ಶಾಕಿರ್ (41) ಎಂಬಾತನನ್ನು 2016 ರ ಎಪ್ರಿಲ್ 5 ರಂದು ಮಂಗಳೂರು ಕಾರಾಗೃಹದಿಂದ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಕರೆತಂದಿದ್ದು, ಆರೋಪಿಯು ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದಾಗ ಏಕಾಏಕಿ ತಪ್ಪಿಸಿಕೊಂಡು ಪರಾರಿಯಾಗಲು ಪ್ರಯತ್ನಿಸಿರುವುದಾಗಿದೆ. ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 91/2016, ಕಲಂ : 224 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು.
ಸದ್ರಿ ಪ್ರಕರಣದ ತನಿಖೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಪ್ರಕೃತಿ ಕಲ್ಯಾಣಪುರ್ ಅವರು ಆರೋಪಿಗೆ 2 ವರ್ಷಗಳ ಸಾದಾ ಕಾರಾಗೃಹ ವಾಸ ಶಿಕ್ಷೆ ಅಕ್ಟೋಬರ್ 5ರಂದು ತೀರ್ಪು ನೀಡಿದ್ದಾರೆ.
ಸದ್ರಿ ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಆಗಿನ ಪುತ್ತೂರು ನಗರ ಠಾಣಾ ಪಿಎಸ್ಸೈ ಖಾದರ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಕಾನೂನು ಅಭಿಯೋಜಕ ಮನೋಜ್ ಕುಮಾರ್ ಅವರು ವಾದಮಂಡಿಸಿದ್ದಾರೆ.












0 comments:
Post a Comment