ಧರ್ಮಸ್ಥಳ, ಅಕ್ಟೋಬರ್ 19, 2026 (ಕರಾವಳಿ ಟೈಮ್ಸ್) : ಸೌತಡ್ಕ ದೇವಸ್ಥಾನದ ಬಳಿ ಅಂಗಡಿಯಲ್ಲಿ ಎರಡು ತಂಡಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಅ 18 ರಂದು ಬೆಳಿಗ್ಗೆ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
ಬೆಳ್ತಂಗಡಿ, ಕೊಕ್ಕಡ ನಿವಾಸಿ ಕೃಷ್ಣ ಭಟ್ ಅವರು ನೀಡಿದ ದೂರಿನಂತೆ ಅ 18 ರಂದು ಬೆಳ್ತಂಗಡಿ ಕೊಕ್ಕಡ ಗ್ರಾಮದ ಶ್ರೀ ಮಹಾ ಗಣಪತಿ ಸೇವಾ ಟ್ರಸ್ಟ್ ನ ಕಟ್ಟಡದ ಅಂಗಡಿಯಲ್ಲಿ ರಾಘವ ಭಂಡಾರಿ ಎಂಬವರು ಮತ್ತು ಅವರ ಕೆಲಸದವರು ವ್ಯಾಪಾರ ಮಾಡುತ್ತಿದ್ದಾಗ, ಸದ್ರಿ ಅಂಗಡಿಯಲ್ಲಿ ಈ ಹಿಂದೆ ವ್ಯಾಪಾರ ನಡೆಸುತ್ತಿದ್ದ ಆರೋಪಿÀ ಹರೀಶ್ ಮತ್ತು ಅವರ ಹೆಂಡತಿ ಮಕ್ಕಳು ಹಾಗೂ ಇತರರು ಏಕಾಎಕಿ ಅಂಗಡಿಯ ಒಳಗೆ ಬಂದು ಸುಮಾರು 25 ಸಾವಿರ ರೂಪಾಯಿ ಮೌಲ್ಯದ ಕಟ್ಟಡ ಹಾಗೂ ಸ್ವತ್ತುಗಳನ್ನು ಹಾನಿ ಮಾಡಿ ರಾಘವ ಭಂಡಾರಿ ಮತ್ತು ಅವರ ಕೆಲಸದವರಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ರಿ ಪ್ರಕರಣ ಮುಂದುವರಿದಂತೆ, ಸೌತಡ್ಕ ದೇವಸ್ಥಾನದ ಬಳಿ ಅಂಗಡಿಯಲ್ಲಿ ಹರಿಶ್ಚಂದ್ರ ಅವರು ವ್ಯಾಪಾರ ಮಾಡಿಕೊಂಡಿದ್ದಾಗ ಆರೋಪಿಗಳಾದ ರಾಘವ ಭಂಡಾರಿ, ಲಿಂಗಪ್ಪ, ಕಿಶೋರ್, ಚೇತನ್ ಎಂಬವರುಗಳು ಅಂಗಡಿಗೆ ಅಕ್ರಮವಾಗಿ ಪ್ರವೇಶಿಸಿ, ಅಂಗಡಿಯ ಸೊತ್ತುಗಳನ್ನು ಹೊರಗೆ ಬಿಸಾಡಿ, ಹರಿಶ್ಚಂದ್ರರವರಿಗೆ, ಅವರ ಪತ್ನಿಗೆ ಹಾಗೂ ಕೆಲಸಗಾರರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ, ಅನುಚಿತವಾಗಿ ವರ್ತಿಸಿ ಜೀವ ಬೆದರಿಕೆ ಒಡ್ಡಿರುತ್ತಾರೆ ಎಂಬುದಾಗಿ ಹರಿಶ್ಚಂದ್ರರವರ ಪತ್ನಿ ನೀಡಿದ ದೂರಿನಂತೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರತಿದೂರು ಸಲ್ಲಿಸಿದ್ದಾರೆ. ಎರಡೂ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.















0 comments:
Post a Comment