ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ನಂಬಿಸಿ ಪುತ್ತೂರಿನ ವ್ಯಕ್ತಿಗೆ ಕೋಟ್ಯಂತರ ರೂಪಾಯಿ ವಂಚನೆ : ಪ್ರಕರಣ ದಾಖಲು - Karavali Times ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ನಂಬಿಸಿ ಪುತ್ತೂರಿನ ವ್ಯಕ್ತಿಗೆ ಕೋಟ್ಯಂತರ ರೂಪಾಯಿ ವಂಚನೆ : ಪ್ರಕರಣ ದಾಖಲು - Karavali Times

728x90

12 October 2026

ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ನಂಬಿಸಿ ಪುತ್ತೂರಿನ ವ್ಯಕ್ತಿಗೆ ಕೋಟ್ಯಂತರ ರೂಪಾಯಿ ವಂಚನೆ : ಪ್ರಕರಣ ದಾಖಲು

ಪುತ್ತೂರು, ಅಕ್ಟೋಬರ್ 12, 2026 (ಕರಾವಳಿ ಟೈಮ್ಸ್) : ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಮುಂಬೈ ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಬಂಧನದ ಭೀತಿ ಹುಟ್ಟಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. 

ಆರೋಪಿಗಳು ವಾಟ್ಸಪ್ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿ, ಬ್ಯಾಂಕ್ ಖಾತೆಗಳ ಪರಿಶೀಲನೆ ಮತ್ತು ಹಣದ ದೃಢೀಕರಣದ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್ ಟಿ ಜಿ ಎಸ್ ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ. ಇದನ್ನು ನಂಬಿದ ದೂರುದಾರರು ಸೆ 2 ರಿಂದ ಅ 6ರವರೆಗೆ ಹಂತ ಹಂತವಾಗಿ ಒಟ್ಟು 1 ಕೋಟಿ 31 ಲಕ್ಷದ 50 ಸಾವಿರ ರೂಪಾಯಿ ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ.

ನಂತರ ಇದು ಸೈಬರ್ ವಂಚನೆ ಎಂಬುದನ್ನು ಅರಿತ ದೂರುದಾರರು ಸೈಬರ್ ಸಹಾಯವಾಣಿ 1930ಕ್ಕೆ ಕರೆ ಮಾಡಿ ದೂರು ನೀಡಿರುವುದಾಗಿದೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ನಂಬಿಸಿ ಪುತ್ತೂರಿನ ವ್ಯಕ್ತಿಗೆ ಕೋಟ್ಯಂತರ ರೂಪಾಯಿ ವಂಚನೆ : ಪ್ರಕರಣ ದಾಖಲು Rating: 5 Reviewed By: karavali Times
Scroll to Top