ಗಾಂಧೀಜಿಯವರ ಬದುಕಿನ ಮಾದರಿಯೇ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ನಾಯಕನನ್ನಾಗಿ ಮಾಡಿತ್ತು : ಮಂಜುನಾಥ ಭಂಡಾರಿ - Karavali Times ಗಾಂಧೀಜಿಯವರ ಬದುಕಿನ ಮಾದರಿಯೇ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ನಾಯಕನನ್ನಾಗಿ ಮಾಡಿತ್ತು : ಮಂಜುನಾಥ ಭಂಡಾರಿ - Karavali Times

728x90

2 October 2026

ಗಾಂಧೀಜಿಯವರ ಬದುಕಿನ ಮಾದರಿಯೇ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ನಾಯಕನನ್ನಾಗಿ ಮಾಡಿತ್ತು : ಮಂಜುನಾಥ ಭಂಡಾರಿ

ಮಂಗಳೂರು, ಅಕ್ಟೋಬರ್ 02, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿ ಜಯಂತಿ ಕಾರ್ಯಕ್ರಮ ನಗರದ ರಾಜಾಜಿ ಉದ್ಯಾನವನದಲ್ಲಿ ಅ 2 ರಂದು ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಪ್ರತಿಮೆಗೆ ಖಾದಿ ಹಾರ ಮತ್ತು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಲಾಯಿತು.

ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಗಾಂಧೀಜಿಯವರ ಬದುಕೇ ಇತರರಿಗೆ ಮಾದರಿಯಾಗಿದೆ. ಅವರು ಮಾತನ್ನಾಡಿದ್ದಕ್ಕಿಂತಲೂ ಇತರರ ಮಾತನ್ನು ಗೌರವದಿಂದ ಆಲಿಸಿ ಪ್ರತಿ ವ್ಯಕ್ತಿಗೆ ಗೌರವ ನೀಡಿದ್ದರು. ಇದುವೇ ಸ್ವಾತಂತ್ರ್ಯ ಹೋರಾಟದಲ್ಲಿ ಅವರನ್ನು ದೇಶದ ನಾಯಕನಾಗಿ ಮಾಡಿತ್ತು ಎಂದರು.

ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹೀದ್, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಮಾತನಾಡಿದರು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಪೆÇಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಎಸ್ಪಿ ಡಾ ಅರುಣ್ ಕೆ., ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಡಿಸಿಪಿ ಸ್ಯಾಮ್ ವರ್ಗಿಸ್, ಡಿ.ಡಿ.ಪಿ.ಐ ಶಶಿಧರ್, ಭಾರತ್ ಸೇವಾ ದಳದ ಮುಖಂಡರಾದ ಬಶೀರ್ ಬೈಕಂಪಾಡಿ, ಟಿ.ಕೆ. ಸುಧೀರ್ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸಮಾರಂಭದಲ್ಲಿ ಸರ್ವ ಧರ್ಮ ಪ್ರಾರ್ಥನೆ ಹಾಗೂ ಗಾಂಧೀಜಿಯವರಿಗೆ ಪ್ರಿಯವಾದ ‘ರಘುಪತಿ ರಾಘವ ರಾಜಾರಾಮ್’ ಹಾಗೂ ‘ವೈಷ್ಣವ ಜನತೋ’ ಭಜನೆಗಳ ಗಾಯನ ಪ್ರಸ್ತುತಪಡಿಸಲಾಯಿತು. ಗಾಂಧಿ ಜಯಂತಿ ಅಂಗವಾಗಿ ವಾರ್ತಾ ಇಲಾಖೆ ಪ್ರಕಟಸಿರುವ ವಿಶೇಷ ಸಂಚಿಕೆಗಳನ್ನು ಇದೇ ವೇಳೆ ಬಿಡುಗಡೆಗೊಳಿಸಲಾಯಿತು.

ಬಾಪೂಜಿ ಪ್ರಬಂಧ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಯಂತಿಯ ಅಂಗವಾಗಿ ಪ್ರೌಢ ಶಾಲೆ, ಪದವಿಪೂರ್ವ ಹಾಗೂ ಸ್ನಾತಕ-ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಸ್ವಾಗತಿಸಿ, ಸೈದುದ್ದೀನ್ ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಗಾಂಧೀಜಿಯವರ ಬದುಕಿನ ಮಾದರಿಯೇ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ನಾಯಕನನ್ನಾಗಿ ಮಾಡಿತ್ತು : ಮಂಜುನಾಥ ಭಂಡಾರಿ Rating: 5 Reviewed By: karavali Times
Scroll to Top