ಬೆಳ್ಳಾರೆ, ಅಕ್ಟೋಬರ್ 20, 2026 (ಕರಾವಳಿ ಟೈಮ್ಸ್) : ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿ ಐದು ಮಂದಿ ಆರೋಪಿಗಳನ್ನು ಬಂಧಿಸಿ ನಗದು ಹಣ ವಶಪಡಿಸಿಕೊಂಡ ಘಟನೆ ಸವಣೂರು ಕುವತ್ತೋಡಿ ಎಂಬಲ್ಲಿ ಅ 20 ರಂದು ಸಂಜೆ ವೇಳೆ ನಡೆದಿದೆ.
ಬಂಧಿತ ಆರೋಪಿಗಳನ್ನು ಗುರುವ, ಇಸುಬು, ಕುಶಾಲಪ್ಪ, ತಾಜುದ್ದೀನ್ ಹಾಗೂ ರಾಮಣ್ಣ ಎಂದು ಹೆಸರಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಸೈ ಈರಯ್ಯ ಡಿ ಎನ್ ಅವರ ನೇತೃತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದು, ಆರೋಪಿಗಳಿಂದ 18,150/- ರೂಪಾಯಿ ನಗದು ಸಹಿತ ಕೃತ್ಯಕ್ಕೆ ಬಳಸಿದ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment