ಬಂಟ್ವಾಳ, ಅಕ್ಟೋಬರ್ 09, 2026 (ಕರಾವಳಿ ಟೈಮ್ಸ್) : ಫರಂಗಿಪೇಟೆ ಸಮೀಪದ ಕುಂಪಣಮಜಲು ಎಂಬಲ್ಲಿ ಮಾದಕ ವಸ್ತು ಸೇವಿಸಿ ನಶೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಅ 8 ರಂದು ರಾತ್ರಿ ನಡೆದಿದೆ.
ಬಂಧಿತ ಆರೋಪಿಯನ್ನು ಪುದು ಗ್ರಾಮದ ನಿವಾಸಿ ಮುಹಮ್ಮದ್ ಮುಸ್ತಫಾ ಎಂದು ಹೆಸರಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಸ್ಸೈ ಲೋಲಾಕ್ಷ ಕೆ ಅವರ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾ ಪೊಲೀಸರನ್ನು ಕಂಡು ಓಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಹಿಡಿದು ವಿಚಾರಿಸಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.














0 comments:
Post a Comment