ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಕಳವು ಪ್ರಕರಣ ಬೇಧಿಸಿದ ಪೊಲೀಸರು : ದೆಹಲಿ ಮೂಲದ ಇಬ್ಬರು ಖದೀಮರು ಅಂದರ್, 18 ಲಕ್ಷ ಮೌಲ್ಯದ ಚಿನ್ನಾಭರಭಣ ವಶಕ್ಕೆ - Karavali Times ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಕಳವು ಪ್ರಕರಣ ಬೇಧಿಸಿದ ಪೊಲೀಸರು : ದೆಹಲಿ ಮೂಲದ ಇಬ್ಬರು ಖದೀಮರು ಅಂದರ್, 18 ಲಕ್ಷ ಮೌಲ್ಯದ ಚಿನ್ನಾಭರಭಣ ವಶಕ್ಕೆ - Karavali Times

728x90

3 October 2026

ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಕಳವು ಪ್ರಕರಣ ಬೇಧಿಸಿದ ಪೊಲೀಸರು : ದೆಹಲಿ ಮೂಲದ ಇಬ್ಬರು ಖದೀಮರು ಅಂದರ್, 18 ಲಕ್ಷ ಮೌಲ್ಯದ ಚಿನ್ನಾಭರಭಣ ವಶಕ್ಕೆ

 ಮಂಗಳೂರು, ಅಕ್ಟೋಬರ್ 03, 2026 (ಕರಾವಳಿ ಟೈಮ್ಸ್) : ಮಂಗಳೂರು ಉತ್ತರ ಹಾಗೂ ಬರ್ಕೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಸೆ 27 ಹಾಗೂ 28 ರಂದು ನಡೆದ ಎರಡು ಪ್ರತ್ಯೇಕ ಮನೆ ಕಳವು ಪ್ರಕರಣ ಬೇಧಿಸಿರುವ ಮಂಗಳೂರು ಪೊಲೀಸರು ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರಿಂದ ಕಳವುಗೈದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

ಬಂಧಿತ ಆರೋಪಿಗಳನ್ನು ದೆಹಲಿ ಮೂಲದ ಶೋಕಿನ್ ಎಂಬವರ ಪುತ್ರ ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34) ಹಾಗೂ ವಿಷ್ಣು ಜಾಟ್ ಎಂಬವರ ಪುತ್ರ ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಎಂದು ಹೆಸರಿಸಲಾಗಿದೆ. 

ಮಂಗಳೂರು ನಗರದ ಅಳಕೆ ಕಂಬ್ಲ ಕ್ರಾಸ್ ರಸ್ತೆಯಲ್ಲಿರುವ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್ ನಲ್ಲಿನ ಮನೆಯೊಂದರಲ್ಲಿ ಸೆ 28 ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಯ ಬಾಗಿಲಿಗೆ ಲಾಕ್ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದು, ಸಂಜೆ ಸುಮಾರು 5.10ಕ್ಕೆ ಮನೆಗೆ ಹಿಂದಿರುಗಿ ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಒಳನುಗ್ಗಿದ ಕಳ್ಳರು ಸುಮಾರು 14 ಲಕ್ಷ ಮೌಲ್ಯದ ಚಿನ್ನಾಭರಣಗಳು, ನಗದು ಹಣ, ವಾಚ್ ಹಾಗೂ ಒಂದು ಟ್ರಾಲಿ ಬ್ಯಾಗ್ ಸೇರಿದಂತೆ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಅದೇ ರೀತಿ ಸೆ 27 ರಂದು ಹಗಲು ವೇಳೆಯಲ್ಲಿ ಬರ್ಕೆ ಪೆÇಲೀಸ್ ಠಾಣಾ ಸರಹದ್ದಿನ ಬೊಕ್ಕಪಟ್ನ ರಸ್ತೆಯ ಮನೆಯೊಂದರಲ್ಲಿ ಲಾಕರ್ ಹೊಡೆದು ಕಳವು ಮಾಡಲು ಯಾವುದೇ ಬೆಲೆ ಬಾಳುವ ಸೊತ್ತು ದೊರೆಯದೇ, ಚೆಕ್ ಪುಸ್ತಕಗಳನ್ನು ಕಳವು ಮಾಡಿದ್ದು, ಈ ಬಗ್ಗೆ ಬರ್ಕೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಪ್ರಕರಣಗಳ ತನಿಖೆಯನ್ನು ಕೈಗೊಂಡು ಕೇಂದ್ರ ಉಪವಿಭಾಗದ ಸಹಾಯಕ ಪೆÇಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡದ ಮೂಲಕ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪತ್ತೆಯಾಗಿದ್ದು, ತಕ್ಷಣ ಗುಜರಾತ್ ರಾಜ್ಯದ ವಡೋದರಾ ಪೆÇಲೀಸರ ಸಹಾಯ ಪಡೆಯಲಾಯಿತು.

ಪೆÇಲೀಸರ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾದ 24 ಗಂಟೆಗಳ ಒಳಗಾಗಿ ಸೆ 29 ರಂದು ವಡೋದರದಲ್ಲಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಎಲ್ಲಾ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಸುಮಾರು 18 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಯ ಸಲುವಾಗಿ ಆರೋಪಿಗಳನ್ನು ಪೆÇಲೀಸ್ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ಎಂಬಾತನ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ಮತ್ತು ಈತನ ವಿರುದ್ದ ವಾರಂಟು ಹಾಗೂ ಪೆÇ್ರಕ್ಲಮೇಶನ್ ಬಾಕಿ ಇದ್ದು, ಸಂಬಂಧಪಟ್ಟ ಠಾಣೆಗಳಿಗೆ ಮುಂದಿನ ಕ್ರಮಕ್ಕಾಗಿ ಮಾಹಿತಿಯನ್ನು ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಕಳವು ಪ್ರಕರಣ ಬೇಧಿಸಿದ ಪೊಲೀಸರು : ದೆಹಲಿ ಮೂಲದ ಇಬ್ಬರು ಖದೀಮರು ಅಂದರ್, 18 ಲಕ್ಷ ಮೌಲ್ಯದ ಚಿನ್ನಾಭರಭಣ ವಶಕ್ಕೆ Rating: 5 Reviewed By: karavali Times
Scroll to Top