ಅಲ್ಪಸಂಖ್ಯಾತ ವರ್ಗದ ಬಿ.ಎಡ್. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆಗೆ ಅರ್ಜಿ ಆಹ್ವಾನ - Karavali Times ಅಲ್ಪಸಂಖ್ಯಾತ ವರ್ಗದ ಬಿ.ಎಡ್. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆಗೆ ಅರ್ಜಿ ಆಹ್ವಾನ - Karavali Times

728x90

14 October 2026

ಅಲ್ಪಸಂಖ್ಯಾತ ವರ್ಗದ ಬಿ.ಎಡ್. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು, ಅಕ್ಟೋಬರ್ 14, 2026 (ಕರಾವಳಿ ಟೈಮ್ಸ್) : 2026-27ನೇ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜ್ಯುಕೇಶನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ  ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ 25 ಸಾವಿರ ರೂಪಾಯಿ ವಿಶೇಷ  ಪೆÇ್ರೀತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹಿಂದಿನ ವರ್ಷದಲ್ಲಿ 80% ಮೇಲ್ಪಟ್ಟ, ಸರ್ಕಾರದ ಮಾನದಂಡಗಳಿಗೆ ಆರ್ಹರಾಗಿರುವ ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿದ್ದು, ದಾಖಲೆಗಳನ್ನು ನಗರದ ಪಾಂಡೇಶ್ವರ ಮೌಲಾನಾ ಆಜಾದ್ ಭವನದಲ್ಲಿರುವ  ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಇಲಾಖಾ ಕಚೇರಿ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವರ್ಗದ ಬಿ.ಎಡ್. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಯೋಜನೆಗೆ ಅರ್ಜಿ ಆಹ್ವಾನ Rating: 5 Reviewed By: karavali Times
Scroll to Top